
ನವದೆಹಲಿ [ಜು.19] : ಅಡಕೆ ಹಾನಿಕಾರಕ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದನ್ನು ರಾಜ್ಯ ಬಿಜೆಪಿ ಖಂಡಿಸಿದೆ. ರಾಜ್ಯದ ಬಿಜೆಪಿ ಸಂಸದರ ನಿಯೋಗವು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ರನ್ನು ಭೇಟಿಯಾಗಿ ಈ ಕುರಿತು ತನ್ನ ಆಕ್ಷೇಪ ವ್ಯಕ್ತಪಡಿಸಿದೆ.
ಯಾವುದೇ ವೈಜ್ಞಾನಿಕ ಕಾರಣಗಳಿಲ್ಲದೆ ಕೇವಲ ಸುಪ್ರೀಂ ಕೋರ್ಟಿನಲ್ಲಿರುವ ಅಫಿಡವಿಟ್ ಆಧಾರದಲ್ಲಿ ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎನ್ನುವ ಉತ್ತರವನ್ನು ಸಂಸತ್ತಿನಲ್ಲಿ ನೀಡಲಾಗಿದೆ. ಕೇಂದ್ರದ ಈ ನಿಲುವು ರಾಜ್ಯದ ಅಡಕೆ ಬೆಳೆಗಾರರ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಂಸದರು ಆರೋಗ್ಯ ಸಚಿವರ ಗಮನಕ್ಕೆ ತಂದರು.
ಐಸಿಎಆರ್-ಸಿಪಿಸಿಆರ್‌ಐ ಸಂಸ್ಥೆಯು ಅಡಕೆ ಸೇವನೆ ಆರೋಗ್ಯಕ್ಕೆ ಹಾನಿ ಮಾಡುವುದಿಲ್ಲ ಎಂದು ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಡಕೆ ಬೆಳೆಗಾರರ ಹಿತ ಕಾಯುವ ಭರವಸೆ ಮೂಡಿಸಬೇಕು. ಈ ಸಂಬಂಧ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್ ಹಿಂಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಸಂಸದರ ನಿಯೋಗ ಒತ್ತಾಯಿಸಿದೆ. ನಿಯೋಗದಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲು, ಜಿ.ಎಂ. ಸಿದ್ದೇಶ್ವರ, ಎ. ನಾರಾಯಣಸ್ವಾಮಿ, ಅಣ್ಣಾಸಾಹೇಬ್ ಜೊಲ್ಲೆ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.