ರಾಜಕಾರಣಿಗಳ ಮಾತು ಕೇಳಲು ಪೊಲೀಸರಿಗೆ ಅಪ್ಪಣೆ!

Published : Sep 28, 2018, 09:33 AM ISTUpdated : Sep 28, 2018, 02:37 PM IST
ರಾಜಕಾರಣಿಗಳ ಮಾತು ಕೇಳಲು ಪೊಲೀಸರಿಗೆ ಅಪ್ಪಣೆ!

ಸಾರಾಂಶ

ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಚುನಾಯಿತ ಪ್ರತಿನಿಧಿಗಳ ಜತೆ ಗೌರವಯುತವಾಗಿ ನಡೆದುಕೊಳ್ಳುವಂತೆ ಬುಧವಾರ ಪೊಲೀಸರಿಗೆ ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು :  ಇತ್ತೀಚೆಗೆ ಪೊಲೀಸರ ವರ್ಗಾವಣೆ ವಿಚಾರದಲ್ಲಿ ಮೈತ್ರಿ ಸರ್ಕಾರದ ಪಾಲುದಾರ ಪಕ್ಷವಾದ ಕಾಂಗ್ರೆಸ್‌ನ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಚುನಾಯಿತ ಪ್ರತಿನಿಧಿಗಳ ಜತೆ ಗೌರವಯುತವಾಗಿ ನಡೆದುಕೊಳ್ಳುವಂತೆ ಬುಧವಾರ ಪೊಲೀಸರಿಗೆ ಸುತ್ತೋಲೆ ಹೊರಡಿಸಿದ್ದಾರೆ.

ಚುನಾಯಿತ ಪ್ರತಿನಿಧಿಗಳು ಜನರ ಕೆಲಸ ನಿರ್ವಹಿಸಲು ಸಂವಿಧಾನಾತ್ಮಕ ಅಧಿಕಾರ ಹೊಂದಿದ್ದಾರೆ. ಹಾಗಾಗಿ ಅವರ ಸಲಹೆ ಮತ್ತು ಸೂಚನೆಗಳ ಪಾಲನೆಗೆ ಪ್ರಯತ್ನಿಸಬೇಕು ಎಂದು ಸ್ಪಷ್ಟವಾಗಿ ಡಿಜಿಪಿ ನೀಲಮಣಿ ಎನ್‌.ರಾಜು ಸೂಚಿಸಿದ್ದಾರೆ.

ಮೂರು ದಿನಗಳ ಹಿಂದೆ ಪೊಲೀಸ್‌ ಇಲಾಖೆಯಲ್ಲಿ 141 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಲಾಗಿತ್ತು. ಆದರೆ ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕರು, ನಮ್ಮ ಕ್ಷೇತ್ರಗಳಲ್ಲಿ ಪೊಲೀಸರು ಮಾತು ಕೇಳುತ್ತಿಲ್ಲ. ಜೆಡಿಎಸ್‌ ಪಕ್ಷದ ಮುಖಂಡರಿಗೆ ಆದ್ಯತೆ ನೀಡುತ್ತಿದ್ದಾರೆ ಎಂಬ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಗೆ ದೂರು ನೀಡಿದ್ದರು.

ಈ ಬೆಳವಣಿಗೆ ಬೆನ್ನೆಲ್ಲೇ ಡಿಜಿಪಿ ಅವರು ಚುನಾಯಿತ ಪ್ರತಿನಿಧಿಗಳ ಸೂಚನೆ ಪಾಲನೆಗೆ ಸುತ್ತೋಲೆ ಹೊರಡಿಸಿರುವುದು ಸಹಜವಾಗಿ ಗಮನ ಸೆಳೆದಿದೆ.

ಏನಿದು ಸುತ್ತೋಲೆ?

* ಜನರಿಂದ ಆಯ್ಕೆಯಾಗಿರುವ ಸಂಸದರು ಮತ್ತು ಶಾಸಕರ ಜತೆ ಸೌಜನ್ಯಯುತವಾಗಿ ನಡೆದುಕೊಳ್ಳಿ.

* ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕರ ಕಾರ್ಯಗಳನ್ನು ನಿರ್ವಹಿಸಲು ಸಂವಿಧಾನಾತ್ಮಕ ಅಧಿಕಾರಿಗಳನ್ನು ಹೊಂದಿದ್ದಾರೆ. ಸಂಸದರು ಹಾಗೂ ಶಾಸಕರ ದೂರವಾಣಿ ಕರೆಗಳನ್ನು ಸ್ವೀಕರಿಸಬೇಕು. ಅವರ ಸಲಹೆ, ಸೂಚನೆ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಸಂಬಂಧ ನಿಯಮಾನುಸಾರ ನಡೆದುಕೊಳ್ಳಬೇಕು.

* ಸಲಹೆ, ಸೂಚನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗದೆ ಹೋದರೆ ತಕ್ಷಣವೇ ಸಂಸದರು ಹಾಗೂ ಶಾಸಕರ ಗಮನಕ್ಕೆ ತರಬೇಕು.

* ಹಿರಿಯ ಪೊಲೀಸ್‌ ಅಧಿಕಾರಿಗಳು ಸಂಸದರು ಹಾಗೂ ಶಾಸಕರನ್ನು ಭೇಟಿ ಮಾಡಲು ಮುಕ್ತ ಅವಕಾಶವಿದೆ. ಆಯಾ ಚುನಾಯಿತ ಪ್ರತಿನಿಧಿಗಳ ಜತೆ ಕ್ಷೇತ್ರದ ಕುಂದು ಕೊರತೆಗಳ ಕುರಿತು ಪೊಲೀಸರು ಚರ್ಚಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ