ರಾಜ್ಯದ 400 ತಾಣಗಳು ನೋ ಸೆಲ್ಫಿ ಝೋನ್

Published : Dec 07, 2016, 01:46 AM ISTUpdated : Apr 11, 2018, 12:48 PM IST
ರಾಜ್ಯದ 400 ತಾಣಗಳು ನೋ ಸೆಲ್ಫಿ ಝೋನ್

ಸಾರಾಂಶ

ಅಪಾ​ಯ​ಕಾರಿ ಸ್ಥಳ​ಗ​ಳಲ್ಲಿ ಸೆಲ್ಫಿ ತೆಗೆ​ದು​ಕೊ​ಳ್ಳುವ ಭರ​ದಲ್ಲಿ ಹೆಚ್ಚಾ​ಗು​ತ್ತಿ​ರುವ ಸಾವು​ಗಳ ಹಿನ್ನೆ​ಲೆ​ಯಲ್ಲಿ ಈ ಕ್ರಮ.

ಕನ್ನಡಪ್ರಭ ವಾರ್ತೆ, ಬೆಂಗಳೂರು: ಪ್ರವಾಸಿ ತಾಣಗಳಲ್ಲಿ ಮೊಬೈಲ್‌ ಫೋನ್‌ನಿಂದ ಸೆಲ್ಫಿ ಫೋಟೊ ತೆಗೆದುಕೊಳ್ಳುವ ವೇಳೆ ಆಕಸ್ಮಿಕ ಸಾವು ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸೋದ್ಯಮ ಇಲಾಖೆ ರಾಜ್ಯದ 400ಕ್ಕೂ ಅಧಿಕ ಪ್ರದೇಶಗಳನ್ನು ‘ನೋ ಸೆಲ್ಫಿ ಝೋನ್‌' ಎಂದು ಘೋಷಿಸಿದೆ.

ಬೆಂಗಳೂರು ಸಮೀಪದ ನಂದಿಬೆಟ್ಟ, ಚಿಂತಾಮಣಿ ಬೆಟ್ಟ, ಗುಡಿಬಂಡೆ ಬೆಟ್ಟಗಳು ಕೂಡ ನೋ ಸೆಲ್ಫಿ ಝೋನ್‌ ವಲಯಗಳಾಗಿದ್ದು, ರಾಜ್ಯದ ಕರಾವಳಿ ವಲಯ, ದಕ್ಷಿಣ ಕರ್ನಾಟಕ ಹಾಗೂ ಹೈದರಾಬಾದ್‌ ಕರ್ನಾಟಕ ಪ್ರದೇಶಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವುದರಿಂದ ಆಗುತ್ತಿರುವ ಅಪಾಯಗಳ ಕುರಿತಂತೆ ಇಲಾಖೆ ಜಾಗೃತಿ ಅಭಿಯಾನವನ್ನೂ ಆರಂಭಿಸಿದೆ.

ಈ ಹಿಂದೆ ರಾಜ್ಯದ ಅನೇಕ ಪ್ರವಾಸಿ ತಾಣಗಳಲ್ಲಿ ಸೆಲ್ಫಿ ತೆಗೆಯಲು ಹೋಗಿ ಹಲವರು ಪ್ರಾಣ ಕಳೆದುಕೊಂಡ ಕುರಿತಂತೆ ಹಾಗೂ ರಾಜ್ಯದ ಅಪಾಯಕಾರಿ ಸೆಲ್ಫಿ ಝೋನ್‌ ಪಟ್ಟಿಮಾಡಿ, ‘ಕನ್ನಡಪ್ರಭ' ಸಮಗ್ರ ಹಾಗೂ ಸರಣಿ ವರದಿಗಳನ್ನು ಪ್ರಕಟಿಸಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು, ನದಿಗಳು, ಸಮುದ್ರ ತೀರ, ಪ್ರವಾಸಿ ತಾಣಗಳಾಗಿ​ರುವ ಬೆಟ್ಟ-ಗುಡ್ಡಗಳು, ಎತ್ತರದ ಪ್ರದೇಶಗಳ​ಲ್ಲಿರುವ ದೇವಸ್ಥಾನಗಳು, ಟ್ರೆಕ್ಕಿಂಗ್‌ ತಾಣಗಳು ಹೀಗೆ ಪ್ರವಾಸಿಗರು ತೆರಳುವ ಕೇಂದ್ರಗಳಲ್ಲಿ ಅದರಲ್ಲೂ ನೈಸರ್ಗಿಕ ತಾಣದ ಪ್ರದೇಶಗಳಲ್ಲಿ ಸೆಲ್ಫಿ​ಯಿಂದಾಗಿ ಅಪಾಯ ಸಂಭವಿಸದಂತೆ ‘ನೋ ಸೆಲ್ಫಿ ಝೋನ್‌' ಫಲಕಗಳನ್ನು ಇಲಾಖೆ ಅಳವಡಿ​ಸುತ್ತಿದೆ. ಈ ಫಲಕಗಳು ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿವೆ. ಇನ್ನೂ ಕೆಲವೆಡೆ ಚಿತ್ರಗಳೇ ಅಪಾಯವನ್ನು ಒತ್ತಿ ಹೇಳುವ ಫಲಕಗಳನ್ನೂ ಅಳವಡಿಸಲಾಗಿದೆ.

ಸಮುದ್ರ ತೀರ ಪ್ರದೇಶಗಳಿಗೆ ಪ್ರತಿವರ್ಷ ಅಕ್ಟೋಬರ್‌ನಿಂದ ಮಾಚ್‌ರ್‍ವರೆಗೆ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ತೆರಳುವುದರಿಂದ ಈ ವೇಳೆ ಸಮುದ್ರ ತೀರದ ಆಯ್ದ ಪ್ರದೇಶಗಳಲ್ಲಿ ಸೆಲ್ಫಿ ನಿರ್ಬಂಧದ ಜತೆಗೆ ತಿಳಿವಳಿಕೆ ಫಲಕಗಳನ್ನೂ ಅಳವಡಿಸಲು ಇಲಾಖೆ ಮುಂದಾಗಿದೆ. 
ವಿಶೇಷವೆಂದರೆ, ಫೋಟೊಗಳನ್ನು ತೆಗೆಯಬ​ಹುದಾದ ತಾಣಗಳಲ್ಲಿ ‘ಇಲ್ಲಿ ಫೋಟೊಗಳನ್ನು ತೆಗೆಯಬಹುದು' ಎಂಬ ಫಲಕಗಳನ್ನೂ ಅಳ​ವಡಿಸಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಗಮನ ನೀಡಲಾಗಿದೆ.

ಪ್ರವಾಸಿ ತಾಣಗಳಲ್ಲಿ ಸೆಲ್ಫಿ ತೆಗೆದು­ಕೊಳ್ಳಲು ಹೋಗಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವ ಜಾಗಗಳನ್ನು ಗುರುತಿಸಲಾಗುತ್ತಿದೆ. ಅಂಥ ಕಡೆಗಳಲ್ಲಿ ಸೆಲ್ಫಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ಸಂದೇಶಗಳನ್ನು ನೀಡುವ ಫಲಕ ಹಾಕುತ್ತೇವೆ. 
- ಪ್ರಿಯಾಂಕ ಖರ್ಗೆ ಪ್ರವಾಸೋದ್ಯಮ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್ ರೀತಿಯಲ್ಲೇ ಮತ್ತೊಂದು ಉಗ್ರ ಕೃತ್ಯ, ಗುಂಡಿನ ದಾಳಿಯಲ್ಲಿ 10 ಸಾವು, ಹಲವರು ಗಂಭೀರ
ಐಟಿ ಪಾರ್ಕ್ ಗುತ್ತಿಗೆ 30 ವರ್ಷ, ವಿಸ್ತರಣೆಗೂ ಅವಕಾಶ: ಸಚಿವ ಪ್ರಿಯಾಂಕ್‌ ಖರ್ಗೆ