ಬರ ಪರಿಹಾರದಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಚಿವ ರಾಮಲಿಂಗ ರೆಡ್ಡಿ

By Suvarna Web DeskFirst Published Dec 27, 2016, 3:07 PM IST
Highlights

ಬರದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರವು ಬರ ಪರಿಹಾರ ಹಣ ನೀಡುವಲ್ಲಿ ಮಲತಾಯಿ ಧೋರಣೆ ಮಾಡುತ್ತಿದ್ದು, ಬಿಜೆಪಿ ರಾಜ್ಯದಲ್ಲಿ ಬರ ಅಧ್ಯಯನ ಮಾಡುವ ಮೊದಲು ಕೇಂದ್ರದಿಂದ ಬರ ಪರಿಹಾರ ಹಣ ಬಿಡುಗಡೆ ಮಾಡಿಸಲಿ ಎಂದಿದ್ದಾರೆ.

ಯಾದಗಿರಿ (ಡಿ.27): ನೋಟು ನಿಷೇಧದ ನಂತರ ರಾಜ್ಯದ ನಾಲ್ಕು ಸಾರಿಗೆ ವಿಭಾಗಗಳಲ್ಲಿ ಇದುವರೆಗೂ 45.57 ಕೋಟಿ ರೂಪಾಯಿಗಳ ನಷ್ಟವಾಗಿದೆ ಮತ್ತು KSRTC ಒಂದರಲ್ಲೇ ಪ್ರತಿದಿನ 28 ಲಕ್ಷ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಯಾದಗಿರಿಯಲ್ಲಿಂದು ಸಾರಿಗೆ ವಿಭಾಗೀಯ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂಬರುವ ನಂಜನಗೂಡು ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳು ಇಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ನೂರು ವರ್ಷಕ್ಕೂ ಹೆಚ್ಚು ಇತಿಹಾಸವಿರುವ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಜನ ಯೋಗ್ಯ ಅಭ್ಯರ್ಥಿಗಳಿದ್ದಾರೆ ಎಂದಿದ್ದಾರೆ.

ಪಕ್ಷದ ಹಿರಿಯರು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಮತ್ತು ಅಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಹೇಳಿದ್ದಾರೆ.

click me!