
ನವದೆಹಲಿ (ಆ.28): ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಹಾಸ್ಟೇನ್ ವಿಶ್ವವಿದ್ಯಾಲಯದ ಆವರಣ ಬಹುಪಾಲು ಜಲಾವೃತಗೊಂಡಿದ್ದು 200 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಅವರಲ್ಲಿ ಇಬ್ಬರನ್ನು ತುರ್ತು ನಿಗಾ ಘಟಕಕ್ಕೆ ಸೇರಿಸಲಾಗಿದೆ ಎಂದು ವಾಷ್ಟಿಂಗ್ಟನ್ ಭಾರತೀಯ ರಾಯಭಾರಿ ಹೇಳಿದ್ದಾರೆ.
ತುರ್ತು ನಿಗಾ ಘಟಕಕ್ಕೆ ಸೇರಿಸಿದವರು ಶಾಲಿನಿ ಮತ್ತು ನಿಖಿಲ್ ಭಾಟಿಯಾ ಎಂದು ತಿಳಿದು ಬಂದಿದೆ. ಅವರ ಸಂಬಂಧಿಕರನ್ನು ಸಂಪರ್ಕಿಸಲಾಗಿದ್ದು, ಆದಷ್ಟು ಬೇಗ ಅವರು ಬರಲಿದ್ದಾರೆ ಎನ್ನಲಾಗಿದೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟಿಸಿದ್ದು, ಭಾರತೀಯ ದೂತವಾಸರು ನಮ್ಮನ್ನು ಸಂಪರ್ಕಿಸಿದ್ದಾರೆ. 200 ಕ್ಕೂ ಹೆಚ್ಚೂ ಭಾರತೀಯ ವಿದ್ಯಾರ್ಥಿಗಳು ಹಾಸ್ಟೇನ್ ವಿವಿಯಲ್ಲಿ ನೀರಿನಲ್ಲಿ ಸಿಲುಕಿ ಹಾಕಿಕೊಂಡಿದ್ದು ಕುತ್ತಿಗೆ ಮಟ್ಟದವರೆಗೆ ನೀರು ಬಂದಿದೆ. ಅವರಿಗೆ ಆಹಾರವನ್ನು ಒದಗಿಸುವ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಅವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೂತವಾಸ ಕಚೇರಿ ತಿಳಿಸಿರುವುದಾಗಿ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
-ಚಿತ್ರ ಕೃಪೆ (ಎಎಫ್'ಪಿ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.