ಪಿಯು ಮೌಲ್ಯಮಾಪನಕ್ಕೆ ಗೈರಾದರೆ ಕ್ರಮ: ಪಿಯು ಬೋರ್ಡ್ ಎಚ್ಚರಿಕೆ

By Web DeskFirst Published Mar 26, 2019, 9:00 AM IST
Highlights

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭ | ಮೌಲ್ಯಮಾಪನಕ್ಕೆ ಗೈರು ಹಾಜರಾಗುವ ಉಪನ್ಯಾಸಕರ ವಿರುದ್ಧ ಶಿಸ್ತು ಕ್ರಮ | ಪಿಯು ಬೋರ್ಡ್ ಎಚ್ಚರಿಕೆ 

ಬೆಂಗಳೂರು (ಮಾ. 26): ಈಗಾಗಲೇ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೌಲ್ಯಮಾಪನಕ್ಕೆ ಗೈರು ಹಾಜರಾಗುವ ಉಪನ್ಯಾಸಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಮಾ.23ರಂದು ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿದೆ. ಒಟ್ಟಾರೆ 18,346 ಮೌಲ್ಯಮಾಪಕರ ಪೈಕಿ 11,817 ಮಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 6,527 ಉಪನ್ಯಾಸಕರು ಗೈರು ಹಾಜರಾಗಿರುವುದು ಇಲಾಖೆ ಗಮನಕ್ಕೆ ಬಂದಿದೆ.

ಈವರೆಗೆ ಕರ್ತವ್ಯಕ್ಕೆ ಹಾಜರಾಗದ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ಮಂಗಳವಾರ ಮೌಲ್ಯಮಾಪನ ಕೇಂದ್ರಗಳಿಗೆ ತಪ್ಪದೇ ಹಾಜರಾಗುವಂತೆ ಸೂಚನೆ ನೀಡಿದೆ. ಒಂದು ವೇಳೆ ಮಂಗಳವಾರವೂ ಗೈರಾದರೆ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪಿಯು ಇಲಾಖೆ ನಿರ್ದೇಶಕ ಪಿ.ಸಿ. ಜಾಫರ್‌ ಎಚ್ಚರಿಕೆ ನೀಡಿದ್ದಾರೆ.

click me!