ನಿಯಮ ಗಾಳಿಗೆ ತೂರುವ ಅನಧಿಕೃತ ಶಾಲೆಗಳಿಗೆ ಕಡಿವಾಣ..!

divya perla   | Asianet News
Published : Jan 08, 2020, 10:01 AM IST
ನಿಯಮ ಗಾಳಿಗೆ ತೂರುವ ಅನಧಿಕೃತ ಶಾಲೆಗಳಿಗೆ ಕಡಿವಾಣ..!

ಸಾರಾಂಶ

ರಾಜ್ಯದಲ್ಲಿ ಹೊಸ ಶಾಲಾ- ಕಾಲೇಜುಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈ ಮೂಲಕ ಅಕ್ರಮವಾಗಿ ತಲೆ ಎತ್ತುವ ಶಾಲಾ ಕಾಲೇಜುಗಳಿಗೆ ಕಡಿವಾಣ ಬೀಳಲಿದೆ.

ಬೆಂಗಳೂರು(ಜ.08): ಅನಧಿಕೃತ ಶಾಲೆಗಳ ಕಡಿವಾಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಹೊಸ ಶಾಲಾ- ಕಾಲೇಜುಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕೆಂಗೇರಿ ಬಳಿಯ ಸೂಲಿಕೆರೆಯಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿ ಬಾಫುಲೆ ಜನ್ಮದಿನಾಚರಣೆ ಹಾಗೂ ಹೊಸ ವರ್ಷದ ಕ್ಯಾಲೆಂಡರ್‌ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಇತ್ತೀಚಿನ ದಿನಗಳಲ್ಲಿ ಕೆಲವು ನಿಮಯಗಳನ್ನು ಮೀರಿ ಖಾಸಗಿ ಶಾಲೆಗಳಿಗೆ ಅನುಮತಿ ನೀಡಲಾಗುತ್ತಿದೆ ಎಂದು ಖಾಸಗಿ ಶಾಲೆಗಳ ದೂರುಗಳನ್ನು ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಭಾರತ್ ಬಂದ್: ಜಿಲ್ಲೆಗಳಲ್ಲಿ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ

ಖಾಸಗಿ ಶಾಲೆಗಳ ಪರವಾಗಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸರ್ಕಾರದ ಕೆಲವು ನಿಯಮಗಳು ಖಾಸಗಿ ಶಾಲೆಗಳಿಗೆ ಮಾರಕವಾಗುತ್ತಿದೆ. ಶೇ.85ರಷ್ಟುಶಾಲೆಗಳನ್ನು ಗಮನದಲ್ಲಿಟ್ಟುಕೊಂಡು ಖಾಸಗಿ ಶಾಲೆಗಳಿಗೆ ನಿಯಮಗಳನ್ನು ರೂಪಿಸಬೇಕು. 2006ರ ನಂತರ ನೇಮಕವಾಗಿರುವ ಶಿಕ್ಷಕರಿಗೆ ಹೊಸ ಪಿಂಚಣಿ ಬದಲಾಗಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪದವಿಪೂರ್ವ ಕಾಲೇಜುಗಳಿಗೆ ಬಡ್ತಿ ಹೊಂದಿರುವ ಉಪನ್ಯಾಸಕರಿಗೆ ಪ್ರೌಢಶಾಲಾ ಸೇವೆಯನ್ನು ಪರಿಗಣಿಸಿ 30 ವರ್ಷಗಳ ಕಾಲಮಿತಿ ಬಡ್ತಿಯನ್ನು ಮಂಜೂರು ಮಾಡಬೇಕು. 1992ರ ನಂತರ ನೇಮಕವಾದ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರಿಗೆ ಕಾಲ್ಪನಿಕ ವೇತನ ಬಡ್ತಿ ಮಂಜೂರು ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಸ್‌.ಸುರೇಶ್‌ಕುಮಾರ್‌, ವಿ.ಸೋಮಣ್ಣ, ಶಾಸಕ ಗೋಪಾಲಯ್ಯ, ಕ್ಯಾಮ್ಸ್‌ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !