ಮಹರಾಣಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

Published : Aug 27, 2018, 01:27 PM ISTUpdated : Sep 09, 2018, 09:20 PM IST
ಮಹರಾಣಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

ಸಾರಾಂಶ

ಮಹಾರಾಣಿ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರು ಇಲ್ಲದ ವೇಳೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.

ಬೆಂಗಳೂರು: ಮಹಾರಾಣಿ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಶೃತಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶೃತಿ ಕೆ.ಆರ್.ವೃತ್ತದ ಸಮೀಪ ಇರುವ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ  ಅಂತಿಮ ವರ್ಷದ ಬಿ.ಎ.ವ್ಯಾಸಂಗ ಮಾಡುತ್ತಿದ್ದರು. ಊರಿಗೆ ಓಡಾಡಲು ಕಷ್ಟವೆಂದು ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. 

ವರಮಹಾಲಕ್ಷ್ಮೀ ನಿಮಿತ್ತ ರಜೆ ಇದ್ದ  ಕಾರಣ ಶೃತಿ ಕೊಠಡಿಯಲ್ಲಿದ್ದ ಸ್ನೇಹಿತೆಯರು ತನ್ನ ಮನೆಗೆ ಹೋಗಿದ್ದರು. ಯಾರು ಇಲ್ಲದ ವೇಳೆ ಶನಿವಾರ ರಾತ್ರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ಬೆಳಗ್ಗೆ 9 ಗಂಟೆಯಾದರೂ ಶೃತಿ ಕೊಠಡಿಯಿಂದ ಹೊರ ಬಂದಿಲ್ಲ.

ವಾರ್ಡನ್ ಬಂದು ಕೊಠಡಿಯ ಬಾಗಿಲು ತಟ್ಟಿದ್ದು, ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಹಾಸ್ಟೆಲ್ ವಾರ್ಡನ್ ಇತರ ಸಿಬ್ಬಂದಿಯನ್ನು ಕರೆಸಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಕೊಠಡಿಯಲ್ಲಿ ಯುವತಿಗೆ ಸೇರಿದ ಮೊಬೈಲ್ ಪತ್ತೆಯಾಗಿದ್ದು, ‘ನನ್ನ ಪೋಷಕರು ಒಳ್ಳೆಯವರು. ನನ್ನ ಆತ್ಮಹತ್ಯೆಗೆ  ಗ್ಗೆ ಅವರನ್ನು ಪ್ರಶ್ನಿಸಬೇಡಿ’ ಎಂದು ಮೊಬೈಲ್‌ನಲ್ಲಿ ಟೈಪ್ ಮಾಡಿ ಇಟ್ಟಿರುವುದು ಲಭ್ಯವಾಗಿದೆ. 

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ಶೃತಿಯ ಸ್ನೇಹಿತರು ಹಾಗೂ ಕಾಲೇಜು ಶಿಕ್ಷಕರನ್ನು ವಿಚಾರಣೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌