ಮತಕ್ಕಾಗಿ ಮಕ್ಕಳಿಗೆ ರಸ ಪ್ರಶ್ನೆ ಸ್ಪರ್ಧೆ, ಗೆದ್ದರೆ ಸಂಸತ್‌ಗೆ ಎಂಟ್ರಿ!

Published : Feb 12, 2019, 08:43 AM IST
ಮತಕ್ಕಾಗಿ ಮಕ್ಕಳಿಗೆ ರಸ ಪ್ರಶ್ನೆ ಸ್ಪರ್ಧೆ, ಗೆದ್ದರೆ ಸಂಸತ್‌ಗೆ ಎಂಟ್ರಿ!

ಸಾರಾಂಶ

 ವಿದ್ಯಾರ್ಥಿಗಳು ರಸ ಪ್ರಶ್ನೆಯಲ್ಲಿ ಗೆದ್ದರೆ ಉಚಿತವಾಗಿ ಸಂಸತ್‌ ಹಾಗೂ ವಿಧಾನಸಭೆಗಳಿಗೆ ಭೇಟಿ ನೀಡಬಹುದು ಹೀಗಂತ ಸರ್ಕಾರವೊಂದು ತನ್ನ ರಾಜ್ಯದ ವಿದ್ಯಾರ್ಥಿಗಳಿಗೆ ಆಫರ್ ನೀಡಿದೆ.

ಕೋಲ್ಕತ್ತಾ[ಫೆ.12]: ಸಾಮಾನ್ಯವಾಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಆಯೋಜಿಸಿ ಬಹುಮಾನ ನೀಡಲಾಗುತ್ತದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳು ರಸ ಪ್ರಶ್ನೆಯಲ್ಲಿ ಗೆದ್ದರೆ ಉಚಿತವಾಗಿ ಸಂಸತ್‌ ಹಾಗೂ ವಿಧಾನಸಭೆಗಳಿಗೆ ಭೇಟಿ ನೀಡಬಹುದು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜಾರಿಗೊಳಿಸಿದ ಸಮಾಜ ಕಲ್ಯಾಣ ಯೋಜನೆಗಳ ಬಗ್ಗೆ ಕಾಲೇಜು ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಿ ಅದರಲ್ಲಿ ವಿಜೇತ ತಂಡಕ್ಕೆ ಉಚಿತವಾಗಿ ಸಂಸತ್‌ ವೀಕ್ಷಿಸುವ ಅವಕಾಶ ಕಲ್ಪಿಸಿದೆ.

ದಕ್ಷಿಣ 24 ಪರಗಣಗಳ ಬರಸಾತ್‌ನಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕಳೆದವಾರ ಸಂಸತ್ತಿಗೆ ಹಾಗೂ ದ್ವಿತೀಯ ಬಹುಮಾನ ಪಡೆದವರು ವಿಧಾನಸಭೆಗೆ ಭೇಟಿ ನೀಡಿದ್ದಾರೆ. ಇವರ ಎಲ್ಲಾ ಖರ್ಚು ವೆಚ್ಚಗಳನ್ನು ಸರ್ಕಾರವೇ ಭರಿಸಿದೆ. ಇದೇ ರೀತಿ 40 ಸ್ಪರ್ಧೆಗಳನ್ನು ಆಯೋಜಿಸಲು ಸರ್ಕಾರ ಉದ್ದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಅಮೆರಿಕ ತೆರಿಗೆ ದಾಳಿಗೆ ಒಳಗಾದ ದೇಶಗಳಿಂದ ಮಾದರಿಯಾದ ಚೀನಾ; ಟ್ರಂಪ್‌ಗೆ ಶಾಕ್ ನೀಡಿ ದಾಖಲೆ ಬರೆದ ಡ್ರ್ಯಾಗನ್
ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ