ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಇಲ್ಲ; ಕೈ ಕೊಯ್ದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

By Suvarna Web DeskFirst Published Sep 9, 2017, 12:43 PM IST
Highlights

ಗ್ರಾಮೀಣ ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ನೀಡುತ್ತಿಲ್ಲ ಎಂದು ಬ್ಯಾಂಕಿಂಗ್ ವ್ಯವಸ್ಥೆ ವಿರುದ್ಧ ಕನ್ನಡಿಗ ಅಭ್ಯರ್ಥಿ ಸಿಡಿದೆದ್ದಿದ್ದಾರೆ. ಬ್ಯಾಂಕಿಂಗ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು (ಸೆ.09): ಗ್ರಾಮೀಣ ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ನೀಡುತ್ತಿಲ್ಲ ಎಂದು ಬ್ಯಾಂಕಿಂಗ್ ವ್ಯವಸ್ಥೆ ವಿರುದ್ಧ ಕನ್ನಡಿಗ ಅಭ್ಯರ್ಥಿ ಸಿಡಿದೆದ್ದಿದ್ದಾರೆ. ಬ್ಯಾಂಕಿಂಗ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹುಬ್ಬಳ್ಳಿಯ ಐಬಿಎಂಆರ್ ಪರೀಕ್ಷಾ ಕೇಂದ್ರದ ಮುಂದೆ ಕನ್ನಡಿಗ ಅಭ್ಯರ್ಥಿ ಸಲೀಮ್ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ಇಂದು ನಡೆಯಬೇಕಿದ್ದ ಗ್ರಾಮೀಣ ಬ್ಯಾಂಕ್ ಪರೀಕ್ಷೆ  ಸ್ಥಗಿತಗೊಂಡಿದೆ.

ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗಿಂತ ಹೊರ ರಾಜ್ಯದವರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ ಎಂದು ವಿದ್ಯಾರ್ಥಿಗಳ ಆರೋಪಿಸಿದ್ದಾರೆ. ಗ್ರಾಮೀಣ ಬ್ಯಾಂಕ್ ಪರೀಕ್ಷೆ ಹುಬ್ಬಳ್ಳಿಯ ಐಬಿಎಂಆರ್ ಪರೀಕ್ಷಾ ಕೇಂದ್ರದಲ್ಲಿ ನಡೆಯಬೇಕಿತ್ತು. ಹೊರ ರಾಜ್ಯದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿ ಕನ್ನಡಿ ಸಲೀಂ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಆಂಧ್ರ ವಿದ್ಯಾರ್ಥಿಗಳು ಕೂಡಾ ಪ್ರತಿಭಟನೆಗೆ ಕುಳಿತಿರುವುದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಲ್ಲು ತೂರಾಟ ಕೂಡಾ ನಡೆದಿದೆ. ಹಾಗಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

  ಕೇವಲ ಹುಬ್ಬಳ್ಳಿಯಲ್ಲಿ ಮಾತ್ರವಲ್ಲ, ದಾವಣಗೆರೆ, ಬೆಂಗಳೂರಿನಲ್ಲಿಯೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ಇದಕ್ಕೆ ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ.

click me!