ರಾಷ್ಟ್ರಧ್ವಜ ಹಾರಿಸಲು ವಿರೋಧ: ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ

By Suvarna Web DeskFirst Published Aug 23, 2017, 7:12 PM IST
Highlights

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ವಿಚಾರವಾಗಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆಯೇರ್ಪಟ್ಟಿದೆ. ಅನಂತನಾಗ್ ಪದವಿ ಕಾಲೇಜಿನಲ್ಲಿ ಕ್ರೀಡಾಕೂಟ ಆಯೊಜಿಸಲಾಗಿದ್ದು, ಪೊಲೀಸರು ರಾಷ್ಟ್ರಧ್ವಜ ಹಾರಿಸಲು ಮುಂದಾಗಿದ್ದಾರೆ. ಆದರೆ ಅದಕ್ಕೆ ಕೆಲವು ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ವಿಚಾರವಾಗಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆಯೇರ್ಪಟ್ಟಿದೆ.

ಅನಂತನಾಗ್ ಪದವಿ ಕಾಲೇಜಿನಲ್ಲಿ ಕ್ರೀಡಾಕೂಟ ಆಯೊಜಿಸಲಾಗಿದ್ದು, ಪೊಲೀಸರು ರಾಷ್ಟ್ರಧ್ವಜ ಹಾರಿಸಲು ಮುಂದಾಗಿದ್ದಾರೆ. ಆದರೆ ಅದಕ್ಕೆ ಕೆಲವು ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳ ಗುಂಪೊಂದು ಟೆಂಟ್’ಗೆ ಬೆಂಕಿ ಹಚ್ಚಿ, ಪೊಲೀಸರತ್ತ ಕಲ್ಲು ತೂರಾಟ ಆರಂಭಿಸಿದೆ. ಅದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

click me!