
ಮಡಿಕೇರಿ: ಕೊಡಗು ಸ್ವಾಯತ್ತತೆ, ಕೊಡವ ಲ್ಯಾಂಡ್ ಕೇಂದ್ರಾಡಳಿತ ಪ್ರದೇಶ ಹಾಗೂ ಕೊಡವ ಜನಾಂಗವನ್ನು ಬುಡಕಟ್ಟು ಜನಾಂಗಕ್ಕೆ ಸೇರಿಸುವ ವಿಚಾರದಲ್ಲಿ ಕೊಡವರ ಬೇಡಿಕೆ ನ್ಯಾಯಸಮ್ಮತವಾಗಿದೆ. ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಕೇಂದ್ರ ಮಾಜಿ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ನಗರದ ಗಾಂಧಿ ಮೈದಾನದಲ್ಲಿ ಸಿಎನ್‌ಸಿ ವತಿಯಿಂದ ಭಾನುವಾರ ನಡೆದ 27ನೇ ಕೊಡವ ನ್ಯಾಷನಲ್ ಕೌನ್ಸಿಲ್ ಡೇ ಕಾರ್ಯಕ್ರಮವನ್ನು ಕೊಡವ ಸಂಪ್ರದಾಯದಂತೆ ಬಾಳೆ ಕಂದು ಕಡಿದು, ಗುಂಡು ಹಾರಿಸಿ ಉದ್ಘಾಟಿಸಿದ ಬಳಿಕ ಮಾತನಾಡಿದರು.
ಕೊಡವರೇನು ಪಾಕಿಸ್ತಾನದಂತೆ ಪ್ರತ್ಯೇಕ ರಾಷ್ಟ್ರದ ಬೇಡಿಕೆಯಿಟ್ಟಿಲ್ಲ. ಸಂವಿಧಾನಬದ್ಧವಾದ ಹಕ್ಕನ್ನೇ ಪ್ರತಿಪಾದಿಸುತ್ತಿದ್ದಾರೆ. ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ಬೇಡಿಕೆ ತಪ್ಪಲ್ಲ. ನಿಮ್ಮ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ. ಸಂವಿಧಾನ ಪರಿಚ್ಛೇದ 8ರಲ್ಲಿ ಕೊಡವ ಭಾಷೆಯ ಸೇರಿಸಬೇಕೆಂಬ ಬೇಡಿಕೆ ನ್ಯಾಯ ಸಮ್ಮತವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.