
ಬೆಂಗಳೂರು(ಆ.24): ಸುದೀಪ್ ಮತ್ತು ಪ್ರಿಯಾ ದಂಪತಿ ಮತ್ತೆ ಒಂದಾಗಿದ್ದಾರೆ. ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್'ಗೆ ತಾವು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸುದೀಪ್ ಮತ್ತು ಪ್ರಿಯಾ ಹಿಂಪಡೆದಿದ್ದಾರೆ.
ಕಳೆದ 2 ವರ್ಷಗಳ ಹಿಂದೆ ಸುದೀಪ್ ಮತ್ತು ಪ್ರಿಯಾ ಫ್ಯಾಮಿಲಿ ಕೋರ್ಟ್'ಗೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ಒಟ್ಟು 9 ಬಾರಿ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಇವರಿಗೆ ನೋಟೀಸ್ ಜಾರಿ ಮಾಡಿತ್ತು. ಆದರೆ ಈವರೆಗೂ ಪ್ರಿಯಾ ಹಾಗೂ ಸುದೀಪ್ ಒಂದು ಬಾರಿಯೂ ಕೋರ್ಟ್'ಗೆ ಹಾಜರಾಗಿರಲಿಲ್ಲ. ಬಳಿಕ ಇಬ್ಬರೂ ತಮ್ಮ ಮಗಳಿಗಾಗಿ ಒಂದಾಗಿದ್ದಾರೆ ಎಂಬ ಮಾತುಗಳು ಹರಿದಾಡಿದ್ದವು. ಕಳೆದ ಬಾರಿ ನಡೆದ ವಿಚಾರಣೆ ವೇಳೆ ಕೋರ್ಟ್ ಕೂಡಾ ಅರ್ಜಿಯನ್ನು ಹಿಂಪಡೆಯಲು ಸೂಚಿಸಿತ್ತು.
ಇಂದು ನಡೆದ ವಿಚಾರಣೆಯಲ್ಲಿ ಇಬ್ಬರ ವಕೀಲರು ಸುದೀಪ್ ಹಾಗೂ ಪ್ರಿಯಾ ಇಬ್ಬರೂ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮಗಳ ಭವಿಷ್ಯದ ಹಿತದೃಷ್ಟಿಯಿಂದ ಸುದೀಪ್ ಮತ್ತು ಪ್ರಿಯಾ ವಾಪಸ್ ಪಡೆದಿರುವುದಾಗಿ ಇಬ್ಬರೂ ಒಂದಾಗಿದ್ದಾರೆ. ಹೀಗಾಗಿ ವಿಚಾರಣೆಯ ಅಗತ್ಯವಿಲ್ಲ, ಇಬ್ಬರೂ ತಾವು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುವುದಾಗಿ ವಕೀಲರು ತಿಳಿಸಿದ್ದಾರೆ. ತಮ್ಮ ಅರ್ಜಿಯನ್ನು ಹಿಂಪಡೆಯುವ ಮೂಲಕ ತಮ್ಮಿಬ್ಬರ ನಡುವಿನ ಮನಸ್ತಾಪವನ್ನು ಮರೆತು ಸುದೀಪ್ ಜೋಡಿ ಮತ್ತೆ ಒಂದಾಗಿದ್ದಾರೆ. ಈ ಮೂಲಕ ಕಳೆದ ಎರಡು ವರ್ಷದ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಇತ್ತೀಚೆಗೆ ತಮ್ಮ ಮಗಳ ಶಾಲಾ ಕಾರ್ಯಕ್ರಮ ಸೇರಿದಂತೆ, ಹಲವಾರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು, ಇಬ್ಬರೂ ಒಂದಾಗುವ ಸೂಚನೆ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.