ಆಫ್ಘನ್ ಅಧ್ಯಕ್ಷರ ಚುನಾವಣಾ ರ‍್ಯಾಲಿ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ!

By Web Desk  |  First Published Sep 17, 2019, 5:30 PM IST

ಅಫ್ಘಾನಿಸ್ತಾನದಲ್ಲಿ ಅಟ್ಟಹಾಸ ಮೆರೆದ ಭಯೋತ್ಪಾದಕರು| ಅಧ್ಯಕ್ಷ ಅಶ್ರಫ್ ಘನಿ ಚುನಾವಣಾ ರ್ಯಾಲಿಯಲ್ಲಿ ಆತ್ಮಹತ್ಯಾ ದಾಳಿ| ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 24 ಜನರ ದುರ್ಮರಣ| ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಧ್ಯಕ್ಷ ಅಶ್ರಫ್ ಘನಿ| ಬೈಕ್'ನಲ್ಲಿ ಬಂದು ಚುನಾವಣಾ ರ್ಯಾಲಿ ಮೇಲೆ ಆತ್ಮಹತ್ಯಾ ದಾಳಿ ನಡೆಸಿದ ಭಯೋತ್ಪಾದಕರು|


ಕಾಬೂಲ್(ಸೆ.17): ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಚುನಾವಣಾ ರ‍್ಯಾಲಿ ಮೇಲೆ ಯಗ್ರರು ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ್ದು, ಸ್ಫೋಟದಲ್ಲಿ ಕನಿಷ್ಟ 24 ಜನ ಮೃತಪಟ್ಟಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಉತ್ತರ ಅಫ್ಘಾನಿಸ್ತಾನದ ಪರ್ವಾನ್ ಪ್ರಾಂತ್ಯದಲ್ಲಿ ಅಶ್ರಫ್ ಘನಿ ಚುನಾವಣಾ ಭಾಷಣ ಮಾಡುತ್ತಿದ್ದರು. ಈ ವೇಳೆ ಬೈಕ್'ನಲ್ಲಿ ಬಂದ ಆತ್ಮಾಹುತಿ ಬಾಂಬ್ ದಾಳಿಕೋರರು ಜನಸಂದಣಿ ಮಧ್ಯೆ ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ.

Tap to resize

Latest Videos

undefined

ಇನ್ನು ಬಾಂಬ್ ಸ್ಫೋಟಗೊಂಡಾಗ ಅಶ್ರಫ್ ಘನಿ ಸನಿಹದಲ್ಲೇ ಇದ್ದರು ಎಂದು ಹೇಳಲಾಗಿದ್ದು, ಅದೃಷ್ಟವಶಾತ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಅಫ್ಘಾನಿಸ್ತಾನದಲ್ಲಿ ಈ ತಿಂಗಳ ಅಂತ್ಯಕ್ಕೆ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಪ್ರಜಾಪ್ರಭುತ್ವ ಮಾದರಿಯ ಚುನಾವಣೆಗೆ ತಡೆಯೊಡ್ಡಲು ಉಗ್ರವಾದಿಗಳು ಪ್ರಯತ್ನ ನಡೆಸಿದ್ದಾರೆ.

click me!