ಚುನಾವಣೆ ವೇಳೆ ಆತ್ಮಹತ್ಯಾ ದಾಳಿ: ರಕ್ತದ ಮಡುವಲ್ಲಿ ಆಫ್ಘನ್!

By Web DeskFirst Published Oct 20, 2018, 9:41 PM IST
Highlights

ಆಫ್ಘಾನಿಸ್ತಾನ ಸಂಸದೀಯ ಚುನಾವಣೆ ವೇಳೆ ಆತ್ಮಹತ್ಯಾ ಬಾಂಬ್ ದಾಳಿ! ಮತಗಟ್ಟೆ ಸಮೀಪ ತನ್ನನ್ನು ತಾನು ಸ್ಫೋಟಿಸಿಕೊಂಡ ಉಗ್ರ! ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 12 ಜನರ ದುರ್ಮರಣ! ಕಾಬೂಲ್‌ನ ಮತಗಟ್ಟೆ ಸಮೀಪ ನಡೆದ ಆತ್ಮಹತ್ಯಾ ಬಾಂಬ್ ದಾಳಿ! ದಾಳಿಯಲ್ಲಿ ಮತದಾರರು ಮತ್ತು ಚುನಾವಣಾ ಸಿಬ್ಬಂದಿ ಹತ 

ಕಾಬುಲ್(ಅ.20): ಆಫ್ಘಾನಿಸ್ತಾನ ಸಂಸದೀಯ ಚುನಾವಣೆ ಸಂದರ್ಭದಲ್ಲಿ, ಮತದಾನದ ವೇಳೆಯಲ್ಲೇ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಉಗ್ರರು ಆತ್ಮಹತ್ಯಾ ದಾಳಿ ನಡೆಸಿದ ಪರಿಣಾಮ ಕನಿಷ್ಠ 15 ಮಂದಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ಉತ್ತರ ಕಾಬುಲ್ ನ ಮತಗಟ್ಟೆಗೆ ಆಗಮಿಸಿದ್ದ ಆತ್ಮಹತ್ಯಾ ದಾಳಿಕೋರ ನೋಡ ನೋಡುತ್ತಿದ್ದಂತೆಯೇ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ವೇಳೆ ಮತದಾನಕ್ಕೆ ಆಗಮಿಸಿದ್ದ 10 ಮಂದಿ ನಾಗರಿಕರು ಮತ್ತು 5 ಮಂದಿ ಚುನಾವಣಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆ ನೆಡೆದ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ, ಚುನಾವಣಾ ಸಿಬ್ಬಂದಿ ಸೇರಿ ಸುಮಾರು 150ಕ್ಕೂ ಅಧಿಕ ಜನ ಇದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ 1 ಮಂದಿ ಸಾವಿಗೀಡಾಗಿ 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಗಂಭೀರ ಗಾಯಾಳುಗಳ ಸಂಖ್ಯೆ ಹೆಚ್ಚಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ. ಅಂತೆಯೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವರೆಗೂ ಯಾವುದೇ ಉಗ್ರ ಸಂಘಟನೆ ದಾಳಿಯ ನೇತೃತ್ವ ವಹಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

click me!