ಸುಮಲತಾ ಮನವೊಲಿಕೆ : ಡಿಕೆಶಿ ಹೇಳಿದ್ದೇನು..?

Published : Mar 10, 2019, 09:34 AM IST
ಸುಮಲತಾ ಮನವೊಲಿಕೆ  : ಡಿಕೆಶಿ ಹೇಳಿದ್ದೇನು..?

ಸಾರಾಂಶ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಷ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಆದರೆ ಇದೀಗ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. ಇದರಿಂದ ಸುಮಲತಾ ಮನವೊಲಿಕೆ ಹೊಣೆ ನನಗೆ ನೀಡಿಲ್ಲ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಸುಮಲತಾ ಅವರನ್ನು ಮನವೊಲಿಸುವ ಹೊಣೆಯನ್ನು ಹೈಕಮಾಂಡ್‌ ನನಗೆ ವಹಿಸಿಲ್ಲ. ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ಸುಮಲತಾ ಪಕ್ಷದ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸುಮಲತಾ ಅವರನ್ನು ಮನವೊಲಿಸಲು ನನಗೆ ಹೇಳಿಲ್ಲ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಇನ್ನು ಸುಮಲತಾ ಕುರಿತು ಎಚ್‌.ಡಿ.ರೇವಣ್ಣ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಏನು ಹೇಳಿದ್ದಾರೆ ಎಂಬುದನ್ನು ನೋಡಿ ಮಾತನಾಡುತ್ತೇನೆ ಎಂದರು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಟಿಕೆಟ್‌ ಹಂಚಿಕೆ ವಿಚಾರ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಅವರೇ ಉತ್ತರಿಸಲಿದ್ದಾರೆ. ಆ ಬಗ್ಗೆ ಮಾತನಾಡುವುದಿಲ್ಲ ಎಂದರು.

ಮಹದಾಯಿ ಯೋಜನೆಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಣ ಕಾಯ್ದಿರಿಸುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ಕಾಮಗಾರಿಗೆ ನೋಟಿಫಿಕೇಶನ್‌ ಹೊರಡಿಸಿದ ಬಳಿಕ ಕಾಮಗಾರಿ ಆರಂಭ ಮಾಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!