
ನವದೆಹಲಿ, [ನ.26]: ಸುನೀಲ್ ಅರೋರಾ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಇಂದು [ಸೋಮವಾರ] ಆದೇಶ ಹೊರಡಿಸಿದ್ದಾರೆ.
ಅರೋರಾ ಅವರು ಡಿಸೆಂಬರ್ 2ನೇ ತಾರೀಕು ಅಧಿಕಾರ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ. ಈವರೆಗೆ ಮುಖ್ಯ ಚುನಾವಣಾ ಆಯುಕ್ತರಾಗಿ ಒ.ಪಿ.ರಾವತ್ ಕಾರ್ಯ ನಿರ್ವಹಿಸಿದ್ದರು.
ನಿವೃತ್ತ ಐಎಎಸ್ ಅಧಿಕಾರಿ ಆಗಿರುವ ಸುನೀಲ್ ಅರೋರಾ 1980ರ ಬ್ಯಾಚ್ ಗೆ ಸೇರಿದವರು. ಅರೋರಾ ಅವರು ಬಿಎ ಪದವೀಧರರು, ಪಂಜಾಬ್ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಎಂ.ಎ. ಮಾಡಿದ್ದಾರೆ.
ಐಎಎಸ್ ಅಧಿಕಾರಿ ಆಗುವ ಮುನ್ನ ಅವರು ಜಲಂಧರ್ ನ ಡಿಎವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ