
ಮೈಸೂರು: ವಿಧಾನಸಭೆ ಚುನಾವಣೆಗೆ ಇನ್ನೂ ಹಲವು ದಿನಗಳು ಬಾಕಿ ಇರುವಾಗಲೇ ಮೈಸೂರಿನಲ್ಲಿ ಚುನಾವಣೆ ಕಣ ರಂಗೇರಿದೆ.
ಲೋಕೋಪಯೋಗಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕೈ ಕಾರ್ಯಕರ್ತರಿಗೆ ಹಾಗೂ ಕ್ಷೇತ್ರದ ಜನರಿಗೆ ಭರ್ಜರಿ ಬಾಡೂಟ ಹಾಕಿಸಿದ್ದಾರೆ.
ನಂಜನಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಸುನೀಲ್ ಬೋಸ್ ಕಾಂಗ್ರೆಸ್ ಕಾರ್ಯಕರ್ತರನ್ನು ಸೆಳೆಯಲು ಸುಮಾರು 5ಸಾವಿರ ಮಂದಿಗೆ ಬಾಡೂಟ ಹಾಕಿ’, ‘ಸಂತೃಪ್ತಗೊಳಿಸುವ’ ಪ್ರಯತ್ನ ಮಾಡಿದ್ದಾರೆ.
ಚುನಾವಣೆ ಹತ್ತಿರ ಬರುತ್ತಿರುವುದರಿಂದ ಬರ್ತಡೇ ಹೆಸರಿನಲ್ಲಿ ಮತದಾರರನ್ನು ಹಿಡಿದಿಡುವ ತಂತ್ರ ಇದಾಗಿದೆ ಎಂಬ ಅಭಿಪ್ರಾಯಯಗಳೂ ಕೇಳಿಬಂದಿವೆ. ಇತ್ತೀಚಿನ ದಿನಗಳಲ್ಲಿ ಬೋಸ್ ಈ ರೀತಿ ಭರ್ಜರಿ ಭೋಜನ ವ್ಯವಸ್ಥೆ ಮಾಡಿಸುತ್ತಿರುವುದು ಎರಡನೇ ಬಾರಿಯಾಗಿದೆ. ಚಾಮುಂಡೇಶ್ವರಿಗೆ ಮಾಡಿರುವ ಹರಕೆಯನ್ನು ತೀರಿಸಲು ಕಳೆದ 10 ವರ್ಷಗಳಿಂದ ಈ ರೀತಿ ಭೋಜನ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.