ಕಪಿಲ್ ಸಿಬಲ್ ವಾದ ನಮ್ಮ ನಿಲುವಿಗೆ ವಿರುದ್ಧ: ಸುನ್ನಿ ವಕ್ಫ್ ಮಂಡಳಿ

By Suvarna Web DeskFirst Published Dec 6, 2017, 5:16 PM IST
Highlights

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟಿನಲ್ಲಿ ಸುನ್ನಿ ವಕ್ಫ್ ಮಂಡಳಿ ಪರವಾಗಿ ವಾದಿಸುತ್ತಿರುವ ಹಿರಿಯ ವಕೀಲ ಹಾಗೂ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿಕೆಗೆ ಖುದ್ದು ಕಕ್ಷಿದಾರರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಲಕ್ನೋ: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟಿನಲ್ಲಿ ಸುನ್ನಿ ವಕ್ಫ್ ಮಂಡಳಿ ಪರವಾಗಿ ವಾದಿಸುತ್ತಿರುವ ಹಿರಿಯ ವಕೀಲ ಹಾಗೂ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿಕೆಗೆ ಖುದ್ದು ಕಕ್ಷಿದಾರರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ವಿಚಾರಣೆಯನ್ನು 2019 ಲೋಕಸಭೆ ಚುನಾವಣೆಯ ಬಳಿಕ ಜುಲೈಯಲ್ಲಿ ನಡೆಸುವಂತೆ ನಿನ್ನೆ ಸುಪ್ರೀಂ ಕೋರ್ಟಿನಲ್ಲಿ ಕಪಿಲ್ ಸಿಬಲ್ ವಾದಿಸಿದ್ದರು.

ಕಪಿಲ್ ಸಿಬಲ್ ನಮ್ಮ ವಕೀಲರು. ಅವರು ರಾಜಕೀಯ ಪಕ್ಷದೊಂದಿಗೂ ಸಂಬಂಧ ಹೊಂದಿದ್ದಾರೆ. ಅವರು ಕೋರ್ಟಿನಲ್ಲಿ ನಿನ್ನೆ ಮಂಡಿಸಿರುವ ವಾದ ಸರಿಯಲ್ಲ. ಆದಷ್ಟು ಶೀಘ್ರದಲ್ಲಿ ಪ್ರಕರಣ ಇತ್ಯರ್ಥವಾಗಬೇಕೆಂದು ನಾವು ಬಯಸುತ್ತೇವೆ. ನಮ್ಮ ನಿಲುವಿಗೂ, ಅವರ ಹೇಳಿಕೆಗೂ ಯಾವುದೇ ಸಂಬಂಧವಿಲ್ಲವೆಂದು,  ಸುನ್ನಿ ವಕ್ಫ್ ಮಂಡಳಿಯ ಹಾಜಿ ಮಹಬೂಬ್ ಹೇಳಿದ್ದಾರೆ.

ಕಪಿಲ್ ಸಿಬಲ್ ವಾದವನ್ನು ಪುರಸ್ಕರಿಸದ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯನ್ನು ಮುಂಬರುವ ಫೆ.08ಕ್ಕೆ   ನಿಗದಿಪಡಿಸಿದೆ.

click me!