
ನವದೆಹಲಿ (ನ.15): ಕಪ್ಪಹಣದ ವಿರುದ್ಧ ಸರ್ಕಾರ ಸಾರಿರುವ ಸಮರವನ್ನು ಬೆಂಬಲಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆಯಲ್ಲಿ ಎಲ್ಲಾ ಪಕ್ಷಗಳಿಗೆ ಕರೆಕೊಟ್ಟಿದ್ದಾರೆಂದು ಸಂಸದೀಯ ವ್ಯವಹಾರಗಳ ಮಂತ್ರಿ ಅನಂತ್ ಕುಮಾರ್ ಹೇಳಿದ್ಧಾರೆ.
ಯಾವುದೇ ವಿಷಯಗಳಿದ್ದರೂ ನಾಳೆ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸೋಣ ಎಂದು ಪ್ರಧಾನಿ ಹೇಳಿದ್ದಾರೆ.
ಸರಕು ಹಾಗೂ ಸೇವಾ ತೆರಿಗೆ (ಜಿಎಸ್’ಟಿ) ವಿಷಯದಲ್ಲಿ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕರಿಸಿವೆ. ಅದೇ ರೀತಿ, ಜನಸಾಮಾನ್ಯರನ್ನು ಬಾಧಿಸುತ್ತಿರುವ ಭ್ರಷ್ಟಚಾರ, ಕಪ್ಪುಹಣ ಹಾಗೂ ನಕಲಿ ನೋಟುಗಳ ವಿರುದ್ಧದ ಸಮರದಲ್ಲೂ ಸರ್ಕಾರವನ್ನು ಬೆಂಬಲಿಸಬೇಕೆಂದು ಮೋದಿ ಕರೆ ನೀಡಿದ್ದಾರೆಂದು ಅನಂತ್ ಕುಮಾರ್ ಹೇಳಿದ್ದಾರೆ.
ದೇಶದಲ್ಲಿ ಏಕಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಚುನಾವಣೆಗಳನ್ನು ನಡೆಸುವ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ನೀಡುವಂತೆಯೂ ಪ್ರಧಾನಿ ಪ್ರತಿಪಕ್ಷಗಳನ್ನು ಕೇಳಿಕೊಂಡಿದ್ದಾರೆ ಎಂದು ಅನಂತ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.