ವಿಶ್ವಾಸಮತ ಯಾಚನೆ: ಪಕ್ಷೇತರರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ

Published : Jul 23, 2019, 12:40 PM ISTUpdated : Jul 23, 2019, 01:12 PM IST
ವಿಶ್ವಾಸಮತ ಯಾಚನೆ: ಪಕ್ಷೇತರರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ

ಸಾರಾಂಶ

ವಿಶ್ವಾಸಮತ ಯಾಚನೆ ವಿಳಂಬ, ಪಕ್ಷೇತರ ಶಾಸಕರಾದ ನಾಗೇಶ್‌ ಹಾಗೂ ಕೆಪಿಜೆಪಿಯ ಶಂಕರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ| ಇಂದೇ ವಿಶ್ವಾಸಮತ ಪ್ರಕ್ರಿಯೆ ಮುಗಿಸುತ್ತೇವೆ: ಸ್ಪೀಕರ್ ಪರ ವಕೀಲರ ವಾದ| ಕೊಟ್ಟ ಮಾತು ಉಳಿಸಿಕೊಳ್ತಾರಾ ಸ್ಪೀಕರ್

ಬೆಂಗಳೂರು[ಜು.23]: ರಾಜ್ಯದ ಮೈತ್ರಿ ಸರ್ಕಾರಕ್ಕೆ ಸೋಮವಾರ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಯಾಚನೆಗೆ ಸೂಚಿಸುವಂತೆ ಪಕ್ಷೇತರ ಶಾಸಕರಾದ ನಾಗೇಶ್‌ ಹಾಗೂ ಕೆಪಿಜೆಪಿಯ ಶಂಕರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಮುಖ್ಯನ್ಯಾಯಮೂರ್ತಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ. 

ಪಕ್ಷೇತರ ಶಾಸಕರಾದ ನಾಗೇಶ್‌ ಹಾಗೂ ಕೆಪಿಜೆಪಿಯ ಶಂಕರ್‌ ಪರ ವಕೀಲ ಮುಕುಲ್ ರೋಹ್ಟಗಿ ಹಾಗೂ ಸ್ಪೀಕರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿಯವರು ಸುಪ್ರೀಂನಲ್ಲಿ ವಾದ-ಪ್ರತಿವಾದ ಮಂಡಿಸಿದರು. ಅಲ್ಲದೇ ಇಂದು, ಮಂಗಳವಾರ ಸಂಜೆ 6 ಗಂಟೆಯೊಳಗಾಗಿ ವಿಶ್ವಾಸಮತಯಾಚನೆ ಪ್ರಕ್ರಿಯೆ ಮುಗಿಸುವುದಾಗಿ ಸ್ಪೀಕರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ  ವಾದಿಸಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾದ ಪ್ರತಿವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ನೇತೃತ್ವದ ಪೀಠ ಪಕ್ಷೇತರ ಶಾಸಕರ ಈ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಸದ್ಯ ರಮೇಶ್ ಕುಮಾರ್ ಸುಪ್ರೀಂನಲ್ಲಿ ಹೇಳಿದಂತೆ ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸುತ್ತಾರಾ? ಅಥವಾ ನಾಳೆ ನಡೆಯಲಿರುವ ಸುಪ್ರೀಂ ತೀರ್ಪಿಗೆ ಕಾಯುತ್ತಾರಾ? ಕಾದು ನೋಡಬೇಕಷ್ಟೇ

ಸುವರ್ಣ ನ್ಯೂಸ್ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ // https://bit.ly/32JJ0DE // ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಣ ಸುಲಿಗೆ ಮಾಡ್ತಿದ್ದ ನಕಲಿ ಪಿಎಸ್ಐ ಬಂಧನ: ಪೊಲೀಸ್‌ ಕನಸು ಈಡೇರದಾಗ ಸುಲಿಗೆ ಕೃತ್ಯ
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ: 30 ಕೇಬಲ್‌ ಅಳವಡಿಕೆ ಮಾತ್ರ ಬಾಕಿ