ಸಿಬಿಐನಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ: ವಿಚಾರಣೆ ಮುಂದೂಡಿದ ಸುಪ್ರೀಂ

By Web DeskFirst Published Nov 20, 2018, 12:05 PM IST
Highlights

ಕೇಂದ್ರ ತನಿಖಾ ದಳ(ಸಿಬಿಐ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ?

ನವದೆಹಲಿ,[ನ.20]: ಕೇಂದ್ರ ತನಿಖಾ ದಳ(ಸಿಬಿಐ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 29ಕ್ಕೆ ಮುಂದೂಡಿದೆ.

 ಇಂದು [ಮಂಗಳವಾರ] ವಿಚಾರಣೆ ವೇಳೆ ಅಲೋಕ್​​ ವರ್ಮಾ ವಿರುದ್ಧ ಆರೋಪಗಳ ಬಗ್ಗೆ ಸಿವಿಸಿ ನೀಡಿರುವ ವರದಿ ಹಾಗೂ ಅದಕ್ಕೆ ಅಲೋಕ್​ ವರ್ಮಾ ಅವರು ನೀಡಿರುವ ಪ್ರತಿಕ್ರಿಯೆ ಮಾಧ್ಯಮದಲ್ಲಿ ಸೋರಿಕೆಯಾಗಿರುವ ಕುರಿತು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಗೊಗೋಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲೋಕ್ ವರ್ಮಾ ಬಂಡಾಯ: ಮೋದಿಗೆ ರಾಜನಾಥ್ ಕಜ್ಜಾಯ?

ಎಲ್ಲಾ ದಾಖಲೆಗಳನ್ನ ಮುಚ್ಚಿದ ಲಕೋಟೆಯಲ್ಲಿ ನೀಡಲಾಗಿತ್ತು. ಅದರೂ ಮಾಹಿತಿ ಸೋರಿಕೆಯಾಗಿದ್ದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಗೊಗೋಯಿ ಅವರು, ಇಂದು ವಿಚಾರಣೆ ನಡೆಯುವುದಿಲ್ಲ ಎಂದು ಹೇಳಿ  ವಿಚಾರಣೆಯನ್ನು ನವೆಂಬರ್​ 29ಕ್ಕೆ ಮುಂದೂಡಿದರು.

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತನ್ನನ್ನು ಕಡ್ಡಾಯ ರಜೆ ಮೇಲೆ ಕಳಿಸಿರುವ ಕೇಂದ್ರ ಸರ್ಕಾರದ ನಡೆ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್​ ವರ್ಮಾ ಸಲ್ಲಿಸಿರುವ ಅರ್ಜಿಯ ವಿಚಾರಣೆ  ಸುಪ್ರೀಂ ಕೋರ್ಟ್​​ನಲ್ಲಿ ನಡೆಯುತ್ತಿದೆ.

click me!