ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಲು ರೆಡ್ಡಿಗೆ ಸುಪ್ರೀಂ ಅನುಮತಿ

Published : May 29, 2017, 10:03 PM ISTUpdated : Apr 11, 2018, 12:35 PM IST
ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಲು ರೆಡ್ಡಿಗೆ ಸುಪ್ರೀಂ ಅನುಮತಿ

ಸಾರಾಂಶ

ತಮ್ಮ ಮದುವೆಯ 25 ನೇ ವಾರ್ಷಿಕೋತ್ಸವವನ್ನು ಬಳ್ಳಾರಿಯಲ್ಲಿ ಆಚರಣೆ ಮಾಡಿಕೊಳ್ಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಬಳ್ಳಾರಿ (ಮೇ. 29): ತಮ್ಮ ಮದುವೆಯ ೨೫ನೇ ವಾರ್ಷಿಕೋತ್ಸವವನ್ನು ಬಳ್ಳಾರಿಯಲ್ಲಿ ಆಚರಣೆ ಮಾಡಿಕೊಳ್ಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಹುಟ್ಟೂರು ಬಳ್ಳಾರಿಗೆ ಬರಲು ಹಾತೊರೆಯುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ, ಮದುವೆ ವಾರ್ಷಿಕೋತ್ಸವವನ್ನು ಗೆಳೆಯರು ಹಾಗೂ ಬಂಧು-ಬಳಗದವರೊಂದಿಗೆ ಆಚರಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ರೆಡ್ಡಿಯ ಮನವಿ ಪುರಸ್ಕರಿಸಿರುವ ನ್ಯಾಯಾಲಯ, ಜೂ.೧ರಿಂದ ನಾಲ್ಕು ದಿನಗಳ ಕಾಲ ಬಳ್ಳಾರಿಯಲ್ಲಿರಲು ಅವಕಾಶ ನೀಡಿದೆ. ರೆಡ್ಡಿ ಆಗಮನ ವಿಚಾರವನ್ನು ಸಹೋದರ ಹಾಗೂ ಕೆಎಂಎಫ್ ಮಾಜಿ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ  ಖಚಿತ ಪಡಿಸಿದ್ದಾರೆ. ಮೇ 31 ರ ಮಧ್ಯರಾತ್ರಿ ರೆಡ್ಡಿ ನಗರಕ್ಕೆ ಬರುವ ಸಾಧ್ಯತೆ ಇದೆ. ಇದೇ ವೇಳೆ ತುಂಗಭದ್ರಾ ಜಲಾಶಯದಲ್ಲಿ ಹೂಳೆತ್ತುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ರೈತರನ್ನು ಭೇಟಿ ಮಾಡಿ, ಅವರ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!
ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ