
ನವದೆಹಲಿ (ಏ. 16): ವಿವಾದದ ಕೇಂದ್ರ ಬಿಂದುವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ‘ಪಿಎಂ ನರೇಂದ್ರ ಮೋದಿ’ ಚಿತ್ರವನ್ನು ವೀಕ್ಷಿಸಿ ಅದರಲ್ಲಿನ ಅಂಶಗಳನ್ನು ಆಧರಿಸಿ ತನಗೆ, ಏ.19ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಅಭ್ಯರ್ಥಿಗಳಿಗೆ ಹೊಸ ತಲೆನೋವು: 48 ಗಂಟೆಯೊಳಗೆ ರಿವೀಲ್ ಮಾಡ್ಬೇಕು ಈ ವಿವರ!
ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಚಿತ್ರ ಬಿಡುಗಡೆ ಮಾಡದಂತೆ ಇತ್ತೀಚೆಗೆ ಚುನಾವಣಾ ಆಯೋಗ, ಚಿತ್ರದ ನಿರ್ಮಾಪಕರಿಗೆ ಸೂಚಿಸಿತ್ತು. ಈ ಆದೇಶವನ್ನು ನಿರ್ಮಾಪಕರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಕುರಿತ ಅರ್ಜಿ ವಿಚಾರಣೆ ವೇಳೆ, ‘ಚುನಾವಣಾ ಆಯೋಗ, ಕೇವಲ ಚಿತ್ರದ ಟ್ರೇಲರ್ ವೀಕ್ಷಿಸಿ ಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ. ನಾವು ಆಯೋಗದ ಸದಸ್ಯರಿಗೆ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲು ಸಿದ್ಧ’ ಎಂದು ನಿರ್ಮಾಪಕರ ಪರ ವಕೀಲರು ವಾದಿಸಿದರು. ಈ ವಾದ ಆಲಿಸಿದ ಆಯೋಗ, ಚಿತ್ರವನ್ನು ಪೂರ್ಣವಾಗಿ ವೀಕ್ಷಿಸಿ, ನಿಮ್ಮ ನಿರ್ಧಾರವನ್ನು ನಮಗೆ ಏ.19ರೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ. ಏ.22ರಂದು ನಾವು ಮತ್ತೆ ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ಹೇಳಿತು. ಅಲ್ಲದೆ ಮುಂದಿನ ಆದೇಶದವರೆಗೂ ಚಿತ್ರವನ್ನು ಬಿಡುಗಡೆ ಮಾಡದಂತೆ ನಿರ್ಮಾಪಕರಿಗೂ ಕೋರ್ಟ್ ಸೂಚಿಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.