ಮಾಲಿನ್ಯ ನಿಯಂತ್ರಣಕ್ಕೆ ಪಟಾಕಿ ಮಾರಾಟಕ್ಕೆ ನಿಷೇಧ...!

By Suvarna Web DeskFirst Published Nov 25, 2016, 12:01 PM IST
Highlights

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಠಾಕೂರ್ ನೇತೃತ್ವದ ತ್ರಿಸದಸ್ಯ ಪೀಠ, ‘‘ಮುಂದಿನ ಆದೇಶದವರೆಗೂ ಪಟಾಕಿ ಮತ್ತು ಸಿಡಿಮದ್ದುಗಳ ಮಾರಾಟಕ್ಕೆ ಪರವಾನಗಿ ನೀಡಬಾರದು,’’ ಎಂದು ಸರ್ಕಾರಕ್ಕೆ ಸೂಚಿಸಿದೆ.

ನವದೆಹಲಿ(ನ.25): ದೀಪಾವಳಿ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ಪಟಾಕಿ ಮತ್ತು ಸಿಡಿಮದ್ದುಗಳ ಮಾರಾಟದ ಮೇಲೆ ನಿಷೇಧಿಸಿ ಸುಪ್ರೀಂ ಕೋರ್ಟ್ ಮಹತ್ತರ ಆದೇಶ ನೀಡಿದೆ.

ಈ ಬಗ್ಗೆ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಠಾಕೂರ್ ನೇತೃತ್ವದ ತ್ರಿಸದಸ್ಯ ಪೀಠ, ‘‘ಮುಂದಿನ ಆದೇಶದವರೆಗೂ ಪಟಾಕಿ ಮತ್ತು ಸಿಡಿಮದ್ದುಗಳ ಮಾರಾಟಕ್ಕೆ ಪರವಾನಗಿ ನೀಡಬಾರದು,’’ ಎಂದು ಸರ್ಕಾರಕ್ಕೆ ಸೂಚಿಸಿದೆ. ಪಟಾಕಿಗಳು ಕ್ಯಾನ್ಸರ್‌'ಗೆ ಕಾರಣವಾಗುತ್ತವೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಅವಶ್ಯಕತೆಯಿದೆ, ಈ ಬಗ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ) ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2015ರಲ್ಲಿ ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ನಿಷೇಧಿಸಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ಜನರಲ್ಲಿ ಪಟಾಕಿಯಿಂದಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಛಾಟಿ ಬೀಸಿದ್ದೂ ಅಲ್ಲದೇ ಈ ಕುರಿತ ಅರ್ಜಿಯನ್ನು ತಳ್ಳಿಹಾಕಿತ್ತು.

click me!