ಬಿಜೆಪಿ ರಥಯಾತ್ರೆ ಅರ್ಜಿ ತ್ವರಿತ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ

By Web DeskFirst Published Dec 25, 2018, 11:34 AM IST
Highlights

ಲೋಕಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ರಥಯಾತ್ರೆಗೆ ಪಡೆಯಲಾಗಿದ್ದ ಅವಕಾಶ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಆದೇಶದ ವಿರುದ್ಧದ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕು ಎಂಬ ಬಿಜೆಪಿ ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನವದೆಹಲಿ (ಡಿ. 25): ಲೋಕಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ರಥಯಾತ್ರೆಗೆ ಪಡೆಯಲಾಗಿದ್ದ ಅವಕಾಶ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಆದೇಶದ ವಿರುದ್ಧದ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕು ಎಂಬ ಬಿಜೆಪಿ ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈ ಕುರಿತು ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಸಾಮಾನ್ಯ ಅರ್ಜಿ ಎಂದು ಪರಿಗಣಿಸಿದ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲು ನಿರ್ಧರಿಸಿದೆ. ಹೀಗಾಗಿ, ಪಶ್ಚಿಮ ಬಂಗಾಳದ 42 ಕ್ಷೇತ್ರಗಳಲ್ಲಿ ‘ಪ್ರಜಾಪ್ರಭುತ್ವ ಉಳಿಸಿ ಯಾತ್ರೆ’ ಕೈಗೊಳ್ಳಲು
ಮುಂದಾಗಿದ್ದ ಬಿಜೆಪಿಗೆ ಹಿನ್ನಡೆಯಾಗಿದೆ.

click me!