ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯವಿಲ್ಲ: ಸುಪ್ರೀಂ ಕೋರ್ಟ್

Published : Jan 09, 2018, 01:17 PM ISTUpdated : Apr 11, 2018, 01:05 PM IST
ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯವಿಲ್ಲ: ಸುಪ್ರೀಂ ಕೋರ್ಟ್

ಸಾರಾಂಶ

ಸಿನೆಮಾ ಹಾಲ್‌ಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದ ಆದೇಶವನ್ನು ತಡೆ ಹಿಡಿಯುವಂತೆ ಕೇಂದ್ರ ಸರ್ಕಾರ ಮಾಡಿದ ಮನವಿಗೆ ಸುಪ್ರೀಂ ಕೋರ್ಟ್ ಸ್ಪಂದಿಸಿದ್ದು, ಈ ಆದೇಶವನ್ನು ರದ್ದುಗೊಳಿಸಿದೆ.

ಹೊಸದಿಲ್ಲಿ: ಸಿನೆಮಾ ಹಾಲ್‌ಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದ ಆದೇಶವನ್ನು ತಡೆ ಹಿಡಿಯುವಂತೆ ಕೇಂದ್ರ ಸರ್ಕಾರ ಮಾಡಿದ ಮನವಿಗೆ ಸುಪ್ರೀಂ ಕೋರ್ಟ್ ಸ್ಪಂದಿಸಿದ್ದು, ಈ ಆದೇಶವನ್ನು ರದ್ದುಗೊಳಿಸಿದೆ.

ಚಿತ್ರ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ, ಚಿತ್ರ ಮಂದಿರಗಳ ವಿವೇಚನೆಗೆ ಈ ನಿರ್ಧಾರ ಬಿಟ್ಟಿದ್ದು, ಎಂದು ಕೋರ್ಟ್ ಹೇಳಿದೆ.

ಆದೇಶ ಜಾರಿಗೊಂಡ ಒಂದು ವರ್ಷದ ಬಳಿಕ, ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ದೀಪಕ್ ಕುಮಾರ್ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದರು. 

ರಾಷ್ಟ್ರಗೀತೆ ನುಡಿಸುವುದಕ್ಕೆ ಹೊಸ ಮಾರ್ಗಸೂಚಿಗಳನ್ನು ರಚಿಸಲು ಅಂತರ್ ಸಚಿವಾಲಯ ಸಮಿತಿ ರಚಿಸಿದೆ. ಅದರ ವರದಿ ಅಂತಿಮಗೊಳ್ಳಲು ಆರು ತಿಂಗಳು ಬೇಕಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 20 ಲಕ್ಷ ಅಕ್ರಮ ವಲಸಿಗರು? ಪೊಲೀಸರ ಲೆಕ್ಕದಲ್ಲಿ ಕೇವಲ 485 ಮಂದಿ!
india Latest News Live: ನ್ಯಾಷನಲ್‌ ಹೆರಾಲ್ಡ್ ಕೇಸು: ಹೈಕೋರ್ಟ್‌ ಮೊರೆ ಹೋದ ಜಾರಿ ನಿರ್ದೇಶನಾಲಯ