
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಗೆ ಇದೀಗ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ 2014ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬಾಂಬೆ ಹೈ ಕೋರ್ಟ್ ನೀಡಿದ ತೀರ್ಪು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ಸತೀಶ್ ಉಕೆ ಎನ್ನುವವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ತಮ್ಮ ವಿರುದ್ಧದ 2 ಪ್ರಕರಣಗಳ ಬಗ್ಗೆ ನಾಮಪತ್ರ ಸಲ್ಲಿಕೆ ವೇಳೆ ಮಾಹಿತಿ ನೀಡದೇ 1951ರ ಜನಪ್ರತಿನಿಧಿ ಕಾಯಿದೆ ಉಲ್ಲಂಘನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ನ್ಯಾ.ರಂಜನ್ ಗೊಗೋಯ್, ನ್ಯಾ.ಎಸ್.ಕೆ ಕೌಲ್, ನ್ಯಾ.ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ, ಬಾಂಬೆ ಹೈ ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ನೋಟಿಸ್ ಜಾರಿ ಮಾಡಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನಾವಿಸ್ ವಿರುದ್ಧ ಒಟ್ಟು 22 ಕ್ರಿಮಿನಲ್ ಪ್ರಕರಣಗಳಿವೆ ಎಂದು myneta.info ನಲ್ಲಿ ಉಲ್ಲೇಖಿಸಲಾಗಿದೆ. ಇದರಲ್ಲಿ ಹಲ್ಲೆ ಪ್ರಕರಣಗಳೂ ಸೇಡಿವೆ. ಉದ್ದೇಶಪೂರ್ವಕವಾಗಿ ಹಲ್ಲೆ, ನ್ಯಾಯಾಂಗ ನಿಂದನೆ ಸೇರಿದಂತೆ ವಿವಿಧ ಪ್ರಕರಣಗಳು ಫಡ್ನಾವಿಸ್ ವಿರುದ್ಧ ದಾಖಲಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.