ಪ್ರಚೋದನಕಾರಿ ಭಾಷಣ: ಯೋಗಿ ವಿರುದ್ಧ ಪ್ರಾಸಿಕ್ಯೂಷನ್?

By Web DeskFirst Published Aug 21, 2018, 5:06 PM IST
Highlights

ಯುಪಿ ಸಿಎಂ ವಿರುದ್ಧ ಪ್ರಚೋಧನಕಾರಿ ಭಾಷಣ ಆರೋಪ! ಯೋಗಿ ವಿರುದ್ದ ಪ್ರಾಸಿಕ್ಯೂಷನ್ ಯಾಕಿಲ್ಲ?! ಪ್ರತಿಕ್ರಿಯೆ ನೀಡುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ನೋಟಿಸ್! ಗೋರಖಪುರ್ ಕೋಮುಗಲಭೆಗೆ ಯೋಗಿ ಭಾಷಣ ಕಾರಣ?!
ರಶೀದ್ ಖಾನ್ ಸಲ್ಲಸಿದ್ದ ಅರ್ಜಿಯ ವಿಚಾರಣೆ ನಡೆಸಿದ  ಸುಪ್ರೀಂ

ನವದೆಹಲಿ(ಆ.21): 2007ರ ದ್ವೇಷ ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಯೋಗಿ ಆದಿತ್ಯನಾಥ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಅದನ್ನು ಪ್ರಶ್ನಿಸಿ ರಶೀದ್ ಖಾನ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರ, ಗೋರಖಪುರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ನೋಟಿಸ್ ನೀಡಿದೆ.

ಯೋಗಿ ಆದಿತ್ಯನಾಥ್ಮಾಡಿದ ಪ್ರಚೋದನಕಾರಿ ಭಾಷಣದ ವಿಡಿಯೋ ಟೇಪ್ ಗಳು ಹಾಗೂ ಸೂಕ್ತ ದಾಖಲೆಗಳು ನಮ್ಮ ಬಳಿ ಇವೆ.  ಹೀಗಾಗಿ ಅಲಹಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

2007, ಜನವರಿ 27ರಂದು ಗೋರಖಪುರ್ ದಲ್ಲಿ ನಡೆದ ಕೋಮುಗಲಭೆಗಳಿಗೆ ಯೋಗಿ ಆದಿತ್ಯನಾಥ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ. ಈ ಕುರಿತು ಸಿಬಿಐ ತನಿಖೆಗೆ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಬಾದ್ ಹೈಕೋರ್ಟ್ ವಜಾಗೊಳಿಸಿತ್ತು.

click me!