
ನವದೆಹಲಿ (ಫೆ.15): ಜಯಾಲಲಿತಾ ಜೈಲುಶಿಕ್ಷೆಯಿಂದ ಪಾರಾಗಿರಬಹುದು, ಆದರೆ ಅವರ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳಿಗೆ ನ್ಯಾಯವ್ಯವಸ್ಥೆಯಿಂದ ಪಾರಾಗಲು ಸಾಧ್ಯವಾಗಲಿಲ್ಲ.
ವಿಚಾರಣಾ ನ್ಯಾಯಾಲಯವು ವಿಧಿಸಿರುವ ರೂ.100 ಕೋಟಿ ದಂಡವನ್ನು ವಸೂಲು ಮಾಡುವ ನಿಟ್ಟಿನಲ್ಲಿ ಜಯಾಲಲಿತಾ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ವಿ.ಕೆ.ಶಶಿಕಲಾ ಹಾಗೂ ಇತರ ಅಪರಾಧಿಗಳಾದ ವಿ.ಎನ್. ಸುಧಾಕರನ್ ಮತ್ತು ಜೆ.ಎಳವರಸಿಯವರೂ ತಲಾ ರೂ.10 ಕೋಟಿ ದಂಡವನ್ನು ಪಾವಾತಿಸಬೇಕಾಗಿರುವುದರಿಂದ ಅವರ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಕೂಡಾ ಮುಟ್ಟುಗೋಲು ಹಾಕಲು ಕೋರ್ಟ್ ಆದೇಶಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿ.ಕೆ. ಶಶಿಕಲಾ, ಅವರ ಬಂಧುಗಳಾದ ಇಳವರಸಿ ಹಾಗೂ ಸುಧಾಕರನ್‌ಗೆ ಸುಪ್ರೀಂಕೋರ್ಟ್ 4 ವರ್ಷ ಜೈಲು ಶಿಕ್ಷೆ ವಿಸಿ ಮಂಗಳವಾರ ತೀರ್ಪು ನೀಡಿದೆ. ಜಯಾ ಅವರು ಮೃತಪಟ್ಟಿರುವುದರಿಂದ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಕೈಬಿಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.