
ಬೆಂಗಳೂರು[ಸೆ. 26] ಕರ್ನಾಟಕ ಉಪಚುನಾವಣೆಗೆ ಸುಪ್ರೀಂ ತಡೆ ನೀಡಿರುವುದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ವಚನದ ಮೂಲಕ ತಿರುಗೇಟು ನೀಡಿದ್ದಾರೆ.
ಅನರ್ಹ ಶಾಸಕರ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ವಚನವೊಂದರ ಮೂಲಕ ಅನರ್ಹರಿಗೆ ಸರಿಯಾದ ಟಾಂಗ್ ನೀಡಿದ್ದಾರೆ.
"ಕಾಲಲಿ ಕಟ್ಟಿದ ಗುಂಡು
ಕೊರಳಲಿ ಕಟ್ಟಿದ ಬೆಂಡು
ತೇಲಲೀಯದು ಗುಂಡು ಮುಳುಗಲೀಯದು ಬೆಂಡು
ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೆ ಕಾಯೋ ಕೂಡಲಸಂಗಮ.
ಅರ್ಹತೆ ಕಳೆದುಕೊಂಡ ಶಾಸಕರ ಪಾಡು ನೋಡಿ ಹೇಳಬೇಕೆನಿಸಿದ್ದು"
ಕುಮಾರಸ್ವಾಮಿ ಅವರ ಕೊಟ್ಟಿರುವ ಟಾಂಗ್ ಅರ್ಥ ಹುಡುಕುತ್ತ ಹೋಗುವ ಬದಲು ಟಾಂಗ್ ನೀಡಿದ್ದಾರೆ ಎಂದಷ್ಟೇ ಹೇಳಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.