
ಬೆಂಗಳೂರು (ಮೇ ೦3): ತಮಿಳುನಾಡಿಗೆ 4 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ. ಆದರೆ, ಸರಕಾರ ಇದನ್ನು ವಿರೋಧಿಸಿದ್ದರಿಂದ ತುಸು ಕಾಲಾವಕಾಶ ನೀಡಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲೇಬೇಕು. ‘ತಮಿಳುನಾಡಿಗೆ ನೀರು ಬಿಡಿ, ಇಲ್ಲವೇ ಪರಿಣಾಮ ಎದುರಿಸಿ’ ಎಂದು ಕರ್ನಾಟಕಕ್ಕೆ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಎಚ್ಚರಿಕೆ ನೀಡಿದೆ.
ತಮಿಳುನಾಡಿಗೆ ಮೇ ತಿಂಗಳೊಳಗೆ 4 ಟಿಎಂಸಿ ನೀರು ಬಿಡಲೇಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. 10 ದಿನದೊಳಗೆ ಕಾವೇರಿ ಸ್ಕೀಂ ರಚನೆಗೆ ಗಡುವು ನೀಡಿದೆ. ಕಾವೇರಿ ಸ್ಕೀಂ ಕರಡು ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದೆ. ಮುಂದಿನ ವಿಚಾರಣೆ ಮೇ 8ಕ್ಕೆ ಮುಂದೂಡಿದೆ. ಕರ್ನಾಟಕ ಚುನಾವಣೆ ಮುಗಿಯುವವರೆಗೆ ಕೇಂದ್ರ ಸಮಯಾವಕಾಶ ಕೋರಿದೆ.
ಸ್ಕೀಮ್ ನ ಕರಡನ್ನು ಸಚಿವ ಸಂಪುಟದ ಮುಂದಿಡಬೇಕು ಎಂದು ಹೇಳಿದ ಅಟಾರ್ನಿ ಜನರಲ್ ಹೇಳಿರುವುದಕ್ಕೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ.
ಸುಪ್ರೀಂ ಕೋರ್ಟ್ ತನ್ನ ಅಂತಿಮ ತೀರ್ಪಿನಲ್ಲಿ ನೀರು ಹಂಚಿಕೆಗೆ ಸ್ಕೀಂ ರಚಿಸಲು ಕೇಂದ್ರ ಸರಕಾರಕ್ಕೆ ಆರು ವಾರಗಳ ಗಡುವು ನೀಡಿತ್ತು. ಫೆ.16ರಂದು ನೀಡಿದ ಈ ತೀರ್ಪು ಹೊರ ಬಿದ್ದಿತ್ತು. ನಿಗದಿತ ಅವಧಿಯೊಳಗೆ ಸ್ಕೀಂ ರಚಿಸುವಲ್ಲಿ ಸರಕಾರ ವಿಫಲವಾಗಿತ್ತು. ಗಡುವು ಅಂತ್ಯವಾಗುವ ಕೊನೆಯ ದಿನ ಏ.9ಕ್ಕೆ ಸ್ಕೀಂ ರಚನೆಗೆ ಮೂರು ತಿಂಗಳು ಹೆಚ್ಚುವರಿ ಕಾಲಾವಕಾಶ ಕೋರಿತ್ತು. ಜತೆಗೆ ಸ್ಕೀಂನ ವ್ಯಾಖ್ಯೆಯ ಬಗ್ಗೆ ಸ್ಪಷ್ಟೀಕರಣ ಕೋರಿ ಅರ್ಜಿ ಸಲ್ಲಿಸಿತ್ತು. ಆಗ ಈ ಅರ್ಜಿಗೆ ಒಪ್ಪದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಗಡುವಿನೊಳಗೆ ಸ್ಕೀಂ ರಚಿಸದ ಕೇಂದ್ರದ ವಿಳಂಬ ನೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.