ಮೋದಿ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ!

By Web DeskFirst Published Feb 6, 2019, 10:23 AM IST
Highlights

ಎನ್‌ಆರ್‌ಸಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ

ನವದೆಹಲಿ[ಫೆ.06]: ಅಸ್ಸಾಂ ನಾಗರಿಕ ನೋಂದಣಿಯ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರವನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ

ಕೇಂದ್ರೀಯ ಶಸ್ತ್ರಾಸ್ತ್ರ ಪಡೆ (ಸಿಎಪಿಎಫ್‌) ಅನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸುವ ಕಾರಣ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಗೃಹ ಸಚಿವಾಲಯದ ವಿರುದ್ಧ ಕಿಡಿ ಕಾರಿದೆ.

ಎನ್‌ಆರ್‌ಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜು.31ರ ಗಡುವು ವಿಸ್ತರಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಎನ್‌ಆರ್‌ಸಿಯನ್ನು ಪೂರ್ಣಗೊಳಿಸಲು ಸಹಕಾರ ನೀಡುತ್ತಿಲ್ಲ. ಗೃಹ ಸಚಿವಾಲಯ ಉದ್ದೇಶ ಎನ್‌ಆರ್‌ಸಿ ಪ್ರಕ್ರಿಯೆಯನ್ನು ನಾಶ ಮಾಡುವುದಾಗಿದೆ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ.

click me!