
ನವದೆಹಲಿ(ಸೆ.05): ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿಂದತೆ, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಇ.ಡಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಈ ಹಿಂದೆ ಚಿದಂಬರಂ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದು ನಿರೀಕ್ಷಣಾ ಜಾಮೀನು ನೀಡುವ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದೆ.
ಆರ್ಥಿಕ ಅಪರಾಧ ಪ್ರಕರಣಗಳು ವಿವಿಧ ಆಯಾಮಗಳನ್ನು ಹೊಂದಿದ್ದು, ಹಣಕಾಸು ಅವ್ಯವಹಾರಗಳ ವಿಚಾರದಲ್ಲಿ ನಿರೀಕ್ಷಣಾ ಜಾಮೀನು ನೀಡುವುದರಿಂದ ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರು ವಿಚಾರಣಾ ನ್ಯಾಯಾಲಯದಲ್ಲಿ ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.