
ನವದೆಹಲಿ (ಡಿ.15): ಲೋಕಸೇವಾ ಆಯೋಗವು 2006ರಲ್ಲಿ ಸಿದ್ಧಪಡಿಸಿದ್ದ 1998,1999 ಮತ್ತು 2004ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಆಯ್ಕೆಪಟ್ಟಿಯನ್ನು ಪರಿಷ್ಕರಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಹತ್ತು ವರ್ಷಗಳಿಂದ ಸೇವೆಯಲ್ಲಿರುವ 393 ಅಧಿಕಾರಿಗಳು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಮತ್ತು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ನ್ಯಾಯಪೀಠ ವಿಚಾರಣೆಗೆ ಪರಿಗಣಿಸಿತು.
ಜೂನ್ 21ರಂದು ಹೈಕೋರ್ಟ್ ನೀಡಿದ್ದ ತೀರ್ಪಿಗೆ ತಡೆಯಾಜ್ಞೆ ನೀಡುವುದರ ಜತೆಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೆಪಿಎಸ್‌ಸಿಗೆ ನಿರ್ದೇಶಿಸಿತು. ಅರ್ಜಿಯ ಮುಂದಿನ ವಿಚಾರಣೆಯನ್ನು ಮಾರ್ಚ್ ತಿಂಗಳಿಗೆ ಮುಂದೂಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.