ಗೋವಾ: ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಗೆ; ನಾಳೆ ವಿಚಾರಣೆ

Published : Mar 13, 2017, 03:32 PM ISTUpdated : Apr 11, 2018, 12:36 PM IST
ಗೋವಾ: ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಗೆ; ನಾಳೆ ವಿಚಾರಣೆ

ಸಾರಾಂಶ

ಗೋವಾದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲೆ ಮೃದುಲಾ ಸಿಂಹ ಬಿಜೆಪಿಯನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಗೋವಾ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ನವದೆಹಲಿ (ಮಾ.13): ಗೋವಾದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲೆ ಮೃದುಲಾ ಸಿಂಹ ಬಿಜೆಪಿಯನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಗೋವಾ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಹೋಳಿ ರಜೆಯ ಹೊರತಾಗಿಯೂ ವಿಶೇಷ ನ್ಯಾಯಪೀಠವನ್ನು ರಚಿಸಿ ವಿಚಾರಣೆ ನಡೆಸಲು ಮುಖ್ಯ ನ್ಯಾ. ಖೇಹರ್ ಒಪ್ಪಿಕೊಂಡಿದ್ದಾರೆ.

ಅತೀ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ಸನ್ನು ರಾಜ್ಯಪಾಲರು ಆಹ್ವಾನಿಸಬೇಕಿತ್ತು.  ಅತೀ ಹೆಚ್ಚು ಮತ ಗಳಿಸಿರುವ ಪಕ್ಷಕ್ಕೆ ಸರ್ಕಾರ ರಚಿಸುವಲ್ಲಿ ಮೊದಲ ಆದ್ಯತೆ ನೀಡಬೇಕೆನ್ನುವ ಸುಪ್ರೀಂಕೋರ್ಟ್ ನ ರಾಮೇಶ್ವರ್ ಪಂಡಿತ್ ತೀರ್ಪಿನ ಆದೇಶವನ್ನು ಕಾಂಗ್ರೆಸ್ ನಾಯಕ ಚಂದ್ರಕಾಂತ್ ಕಾವ್ಲೇಕರ್ ಉದಾಹರಿಸಿದರು.

ಸರ್ಕಾರ ರಚಿಸುವ ಬಗ್ಗೆ ಮಾತುಕತೆ ನಡೆಸಲು ಮನೋಹರ್ ಪರ್ರಿಕರ್ ನೇತೃತ್ವದ ಬಿಜೆಪಿಯನ್ನು ರಾಜ್ಯಪಾಲೆ ಮೃದುಲಾ ಆಹ್ವಾನಿಸಿರುವುದು ಸಾಂವಿಧಾನಿಕ ಪದ್ಧತಿಗೆ ವಿರುದ್ಧವಾಗಿದೆ ಎಂದು ಚಂದ್ರಕಾಂತ್ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್