
ನವದೆಹಲಿ(ಜ.22): ಸಿಬಿಐ ನ್ಯಾಯಾಧೀಶ ಬಿ.ಹೆಚ್. ಲೋಯಾ ಅನುಮಾಸ್ಪದ ಸಾವಿಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್'ನಲ್ಲಿದ್ದ 2 ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ವರ್ಗಾಯಿಸುವಂತೆ ಆದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಇತರ ನ್ಯಾಯಾಲಯಗಳಲ್ಲಿರುವ ಮಧ್ಯಂತರ ಅಥವಾ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಬಾರದಂದು ಆದೇಶಿಸಿದೆ. ಮಹಾರಾಷ್ಟ್ರ ಸರ್ಕಾರ ಲೋಯಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸಿದ್ದು, ತುರ್ತು ಪ್ರಕರಣ ಇದಾಗಿರುವ ಕಾರಣ ಈ ಅರ್ಜಿಗೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಸಲ್ಲಿಸುವಂತೆ ಕೋರ್ಟ್'ಗಳಿಗೆ ತಿಳಿಸಿದೆ.
ಪೆ.2ರಂದು ವಿಚಾರಣೆ ಬರುವ ಪೀಠದಲ್ಲಿ ಖಾನ್ವಿಲ್ಕರ್ ಹಾಗೂ ಚಂದ್ರಚೂಡ್ ಇರುತ್ತಾರೆ. ಸಂಶಯಾಸ್ಪದವಾಗಿ ಸಾವನ್ನಪ್ಪಿದ ಲೋಯಾ ಅವರು ಸೋಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಯಾಗಿದ್ದು, ಈಗ ಖುಲಾಸೆಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.