
ನವದೆಹಲಿ (ಮೇ.12): ವಿವಾದ ಗ್ರಾಸವಾಗಿರುವ ತ್ರಿವಳಿ ತಲಾಖ್'ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್’ನ ಐವರು ನ್ಯಾಯಾಧೀಶರ ಪೀಠವು ತ್ರಿವಳಿ ತಲಾಖ್ ವಿಚ್ಛೇದನದ ‘ಕೆಟ್ಟ ಹಾಗೂ ಅನಪೇಕ್ಷಿತ ‘ ರೀತಿಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಮುಸ್ಲೀಂ ವೈಯಕ್ತಿಕ ಕಾನೂ ಮಂಡಳಿಯು ತ್ರಿವಳಿ ತಲಾಖಿಗೆ ಸಿಂಧುತ್ವ ನೀಡುತ್ತದೆ. ಆದರೆ ಇದನ್ನು ಸುಪ್ರೀಂ ಕೋರ್ಟ್ ಖಂಡಿಸಿದೆ.
ಮುಖ್ಯ ನ್ಯಾ. ಜೆ.ಎಸ್ ಖೇಹರ್ ನೇತೃತ್ವದ ಐವರು ನ್ಯಾಯಾಧೀಶರ ನ್ಯಾಯಪೀಠವು ತ್ರಿವಳಿ ತಲಾಖ್ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು. ಜೊತೆಗೆ ಬಹುಪತ್ನಿತ್ವ, ಮರುಮದುವೆ, ಹಾಗೂ ತ್ರಿವಳಿ ತಲಾಖ್ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ಹಿರಿಯ ವಕೀಲ ರಾಮ್ ಜೇಠ್ಮಲಾನಿ ‘ಇದೊಂದು ಅಸಹ್ಯವಾದ ಪದ್ದತಿ.ಇದರಲ್ಲಿ ಗಂಡನಷ್ಟೇ ಸಮನಾದ ಹಕ್ಕನ್ನು ಹೆಂಡತಿಗೆ ನೀಡಲಾಗುವುದಿಲ್ಲ. ಸಂವಿಧಾನದ ಆರ್ಟಿಕಲ್ 14 ರ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ. ಇದೊಂದು ಅಸಾಂವಿಧಾನಿಕ ವರ್ತನೆ ಎಂದಿದ್ದಾರೆ.
ಮುಸ್ಲೀಂ ರಾಷ್ಟ್ರಗಳಾದ ಪಾಕಿಸ್ತಾನ, ಅಫಘಾನಿಸ್ತಾನ, ಮೊರಾಕ್ಕೋ, ಸೌದಿ ಅರೇಬಿಯಾ ದೇಶಗಳಲ್ಲಿ ತ್ರಿವಳಿ ತಲಾಖನ್ನು ನಿಷೇಧಿಸಿರುವುದನ್ನು ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಸ್ಮರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.