
ಬೆಂಗಳೂರು [ಜು.17] : ರಾಜ್ಯ ರಾಜಕೀಯ ಪ್ರಹಸನ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟ ಮಾಡಿದೆ. ಶಾಸಕರಿಗೆ ವಿಶ್ವಾಸಮತಕ್ಕೆ ಒತ್ತಾಯ ಮಾಡುವಂತಿಲ್ಲ ಎಂದು ತಿಳಿಸಿದೆ. ಸುದೀರ್ಘ ವಿಚಾರಣೆ ಬಳಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ತಾವು ಸ್ವಾಗತ ಮಾಡುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
"
ನಾನು ಓರ್ವ ಶಾಸಕನಾಗಿ ನ್ಯಾಯಾಲಯದ ತೀರ್ಪಿಗೆ ಗೌರವ ನೀಡುತ್ತೇವೆ. ಸ್ಪೀಕರ್ ಅಧಿಕಾರ ಏನು ಎನ್ನುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶಾಸಕರು ಕಲಾಪಕ್ಕೆ ಹೋಗಬಹುದು, ಬಿಡಬಹುದು. ಆದರೆ ನಾನು ನನ್ನ ಶಾಸಕರಿಗೆ ಮನವಿ ಮಾಡುತ್ತೇನೆ. ಬೇರೆಯವರನ್ನು ನಂಬಿ ಹೋಗಬೇಡಿ. ನಿಮ್ಮ ಮೇಲೆ ಮಂಗನ ಟೋಪಿ ಹಾಕುತ್ತಾರೆ ಎಂದರು.
ನಿಮ್ಮನ್ನು ಗೆಲ್ಲಿಸಿರುವ ಜನರ ನೋಡಿ, ನಿಮ್ಮ ಕುಟುಂಬ ನೋಡಿ ಎಂದು ನನ್ನ ಶಾಸಕ ಮಿತ್ರರಿಗೆ ಮನವಿ ಮಾಡುತ್ತೇನೆ ಎಂದು ಡಿಕೆಶಿ ಪರೋಕ್ಷ ವಾರ್ನಿಂಗ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.