ನಾಳೆ ಕೇಂದ್ರಕ್ಕೆ ಅಗ್ನಿ ಪರೀಕ್ಷೆ: ರಫೆಲ್ ತನಿಖೆ ಕುರಿತು ಸುಪ್ರೀಂ ತೀರ್ಪು!

By Web DeskFirst Published Dec 13, 2018, 9:03 PM IST
Highlights

ರಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆಯಾ?| ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯುತ್ತಾ?| ನಾಳೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದೆ ಮಹತ್ವದ ತೀರ್ಪು| ರಫೆಲ್ ಒಪ್ಪಂದದ ತನಿಖೆಗಾಗಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ| ತೀರ್ಪು ಪ್ರಕಟಿಸಲಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನೇತೃತ್ವದ ತ್ರಿಸದಸ್ಯ ಪೀಠ  

ನವದೆಹಲಿ(ಡಿ.13): ರಫೆಲ್ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು, ತನ್ನ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕೋ ಅಥವಾ ಬೇಡವೋ ಎಂಬುದರ ಕುರಿತು ನಾಳೆ(ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.

ರಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

Supreme Court will tomorrow pronounce the judgment in deal case pic.twitter.com/ho7anXqjBF

— ANI (@ANI)

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನೇತೃತ್ವದ ತ್ರಿಸದಸ್ಯ ಪೀಠ ಈ ಕುರಿತು ವಿಚಾರಣೆ ನಡೆಸಿದ್ದು, ಈ ಕುರಿತು ನಾಳೆ ಬೆಳಗ್ಗೆ 10-30ಕ್ಕೆ ತನ್ನ ತೀರ್ಪು ಪ್ರಕಟಿಸಲಿದೆ.

ರಫೆಲ್ ಒಪ್ಪಂದದ ಕುರಿತು ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಸಂಸತ್ತಿನಲ್ಲಿ ಒತ್ತಾಯಿಸುತ್ತಿದೆ. ಈ ಮಧ್ಯೆ ನಾಳಿನ ಸುಪ್ರೀಂ ಕೋರ್ಟ್ ತೀರ್ಪು ಮಹತ್ವ ಪಡೆದುಕೊಂಡಿದೆ.

click me!