
ನವದೆಹಲಿ: ಸಿಬಿಐ ನ್ಯಾಯಾಧೀಶ ಬಿ.ಎಚ್. ಲೋಯಾ ನಿಗೂಢ ಸಾವಿನ ಪ್ರಕರಣದ ತೀರ್ಪು ಹೊರ ಬಿದ್ದ ಅರ್ಧ ಗಂಟೆ ಬಳಿಕ ಸುಪ್ರೀಂ ಕೋರ್ಟ್ ವೆಬ್‌ಸೈಟ್‌ಗೆ ಕನ್ನ ಹಾಕಲಾದ ಘಟನೆ ನಡೆದಿದೆ.
ಕನ್ನ ಹಾಕುವ ಯತ್ನ ನಡೆದಿರುವುದನ್ನು ತಾಂತ್ರಿಕ ವಿಭಾಗ ಪತ್ತೆ ಹಚ್ಚಿದೆ ಮತ್ತು ವೆಬ್‌ಸೈಟ್ ರಕ್ಷಣೆಗೆ ಸಂಬಂಧಿಸಿದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಮೂಲಗಳು ದೃಢಪಡಿಸಿವೆ.
ವೆಬ್‌ಸೈಟ್ ಕಾರ್ಯ ನಿರ್ವಹಣೆ ಎರಡು ಗಂಟೆಗಳ ಕಾಲ ನಿಧಾನವಾಗಿತ್ತು. ಕಳೆದ ಹದಿನೈದು ದಿನಗಳಲ್ಲಿ ಕೆಲವು ಸರ್ಕಾರಿ ವೆಬ್‌ಸೈಟ್‌ಗಳಿಗೆ ಕನ್ನ ಹಾಕಲಾಗಿದೆ. ಇದರಲ್ಲಿ ಚೀನಾದ ಹ್ಯಾಕರ್‌ಗಳ ಕೈವಾಡವಿರುವ ಶಂಕೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.