ಮೊಬೈಲ್ ಸ್ವಿಚ್ ಆಫ್ ಮಾಡಿದ್ದ ಕಾರಣ ಬಿಚ್ಚಿಟ್ಟ ಬಿಜೆಪಿ ಶಾಸಕ ರಾಜೂಗೌಡ

By Web DeskFirst Published Jun 1, 2019, 4:12 PM IST
Highlights

ಒಂದು ಕಡೆ ದೋಸ್ತಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಎದ್ದಿರುವಾಗಲೆ ಬಿಜೆಪಿ ಆಪರೇಶನ್ ಕಮಲಕ್ಕೆ ಮುಂದಾಗುತ್ತಿದೆ ಎಂಬ ಮಾತು ಕೇಳಿ ಬಂದಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸಹ ಬಿಜೆಪಿ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಕೆಲ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದಕ್ಕೆ ಬಿಜೆಪಿ  ಶಾಸಕ ರಾಜೂಗೌಡ ಸ್ಪಷ್ಟನೆ ನೀಡಿದ್ದಾರೆ.

ಯಾದಗಿರಿ(ಜೂ. 01)  ನಾನು ಬಿಜೆಪಿಯಲ್ಲೇ ಇರುತ್ತೇನೆ, ಪಕ್ಷ ಬಿಡುವ ಬಗ್ಗೆ ಊಹಾಪೋಹಗಳು ಬೇಡ.  ತಾಯಿ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದೇನೆ ಎಂದು ಸುರಪುರ ಶಾಸಕ  ನರಸಿಂಹ ನಾಯಕ (ರಾಜುಗೌಡ) ವಿಡಿಯೋ ಮೂಲಕ ಬೆಂಬಲಿಗರಿಗೆ ಹಾಗೂ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಾನು ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತ. ಮೂರೂ ದಿನಗಳಿಂದ ಐಸಿಯುನಲ್ಲಿರುವ ತಾಯಿ ಆರೋಗ್ಯದ ಕಾಳಜಿ ದೃಷ್ಟಿಯಿಂದ ಮೊಬೈಲ್ ಸ್ವಿಚ್ ಆಫ್ ಮಾಡಿದ್ದೆ.  ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆ ಬರಿ ಊಹಾಪೋಹ ಎಂದು ತಿಳಿಸಿ ತಾಯಿಯೊಂದಿಗೆ ಇರುವ ಪೋಟೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಮಿತ್ ಶಾ ಅವರಿಗೆ ಗೃಹ ಖಾತೆ ನೀಡಿದ್ದು ಯಾಕೆ?

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಏರಿದ ನಂತರ ಸಹಜವಾಗಿಯೇ ರಾಜ್ಯದಲ್ಲಿಯೂ ರಾಜಕಾರಣದ ಬದಲಾವಣೆ ಮಾತುಗಳು ಕೇಳಿ ಬರುತ್ತಲೇ ಇವೆ. ಒಂದು ಕಡೆ ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕರನ್ನು ಖುದ್ದು ತಾವೇ ಮಾತನಾಡಿಸುತ್ತಿದ್ದರೆ ಇನ್ನೊಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ಸಹ ಸರಕಾರ ಉಳಿವಿಗೆ ತಮ್ಮದೆ ಆದ ತಂತ್ರ ಪ್ರಯೋಗ ಮಾಡುತ್ತಿದ್ದಾರೆ.

click me!