
ಬೆಂಗಳೂರು (ಅ.13): ಚಾಲುಕ್ಯ ವೃತ್ತದಿಂದ ಹೆಬ್ಬಾಳದವರೆಗೆ ಬಿಡಿಎ ನಿರ್ಮಿಸಲು ಹೊರಟಿರುವ ಉಕ್ಕಿನ ಸೇತುವೆಗೆ ನಗರದಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿದ್ದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಅವರ ಪತ್ರದಲ್ಲಿ ಯೋಜನೆಯನ್ನು ವಿರೋಧಿಸಲು ಕಾರಣಗಳನ್ನು ಈ ಕೆಳಗಿನಂತೆ ನೀಡಿದ್ದಾರೆ.
ಜನಸಾಮಾನ್ಯರ ತೆರಿಗೆ ಹಣದಲ್ಲಿ 1800 ಕೋಟಿ ವೆಚ್ಚದಲ್ಲಿ ಸರ್ಕಾರ ಈ ಯೋಜನೆ ಮಾಡಲು ಮುಂದಾಗಿದೆ. ಜನರ ಅಭಿಪ್ರಾಯವನ್ನೂ ಸಹ ಬಿಡಿಎ ಕೇಳಿಲ್ಲ.
ಬೃಹತ್ ಪ್ರಮಾಣದ ಹಣವನ್ನು ವಿನಿಯೋಗಿಸುವ ಸಾರ್ವಜನಿಕ ಯೋಜನೆಯನ್ನು ರೂಪಿಸುವಾಗ ಸಾರ್ಜನಿಕರ ಅಭಿಪ್ರಾಯವನ್ನು ಕೇಳಬೇಕೆಂದು ಸುಪ್ರೀಂ ಕೋರ್ಟ್ ನಿರ್ದೆಶನವಿದೆ. ಆದರೆ ಸೇತುವೆ ಯೋಜನೆ ಬಗ್ಗೆ ಸಾರ್ವಜನಿಕರಿಗೆ ವಿವರ ನೀಡಿಲ್ಲ.
ಸೇತುವೆ ನಿರ್ಮಾಣಕ್ಕೆ ಸುಮಾರು 862 ಮರಗಳನ್ನು ಕಡಿಯಬೇಕಾಗುತ್ತದೆ. ಪ್ರತಿ ಮರಕ್ಕೆ 10 ಸಸಿಗಳನ್ನು ನೆಡುತ್ತೇವೆ ಎಂದು ಬಿಡಿಎ ಹೇಳಿರುವುದು ಹಾಸ್ಯಾಸ್ಪದ. ಸಸಿಗಳನ್ನು ನೆಡುವುದಕ್ಕೆ ಜಾಗವೂ ಸಹ ಇಲ್ಲ.
ನಿಮಗೆ ಗೊತ್ತಿರುವಂತೆ ಬೆಂಗಳೂರು-ಮೈಸೂರು ರಸ್ತೆಯನ್ನು ಹಿಂದೊಮ್ಮೆ ಅಗಲೀಕರಣ ಮಾಡಲಾಗಿತ್ತು. ಅಗಲೀಕರಣಕ್ಕೂ ಮುನ್ನ ಆ ರಸ್ತೆ ಎಷ್ಟು ಚೆನ್ನಾಗಿತ್ತು? ಸಾವಿರಾರು ಮರಗಳನ್ನು ಕಡಿಯಲಾಗಿದ್ದು 1 ಮರಕ್ಕೆ 10 ಸಸಿಗಳನ್ನು ನೆಡುತ್ತೇವೆ ಎಂದಿದ್ದರು. ಆದರೆ ಅದಿನ್ನೂ ಕಾರ್ಯರೂಪವಾಗಿಲ್ಲ.
ಪತ್ರದಲ್ಲಿ ಇನ್ನೂ ಹೆಚ್ಚಿನ ಅಂಶಗಳನ್ನು ಹೇಳಿದ್ದಾರೆ. ಅದು ಈ ಕೆಳಗಿನಂತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.