
ಮೈಸೂರು (ಮಾ. 31): ಸಿಎಂ ತವರು ಜಿಲ್ಲೆ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಮಿತ್ ಶಾ ಗುಡುಗಿದ್ದಾರೆ.
ಜನಾರ್ದನ ರೆಡ್ಡಿಗೂ ನಮಗೂ ಸಂಬಂಧವಿಲ್ಲ. ಕೆಲವರ ಮೇಲೆ ಆರೋಪವಿದೆ. ಸಮಾಜ ಒಪ್ಪುವಂಥವರಿಗೆ ಮಾತ್ರ ಬಿಜೆಪಿ ಟಿಕೆಟ್ ಕೊಡುತ್ತದೆ ಎಂದು ಅಮಿತ್ ಶಾ ಹೇಳಿರುವುದು ಅಚ್ಚರಿ ಮೂಡಿಸಿದೆ.
ಸಿದ್ದರಾಮಯ್ಯ ಸರ್ಕಾರ ಕಳೆದ 5 ವರ್ಷದಿಂದ ಏನೂ ಮಾಡಿಲ್ಲ. ಕೇಂದ್ರದ ಯೋಜನೆಗಳನ್ನು ಸಮರ್ಥವಾಗಿ ಬಳಸಿಕೊಂಡಿಲ್ಲ. ಹಿಂದುಳಿದವರಿಗೆ ಸಾಕಷ್ಟು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ಹಾಗಿದ್ರೆ ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಓಬಿಸಿ ಮಹತ್ವದ ಬಗ್ಗೆ ಸಿದ್ದರಾಮಯ್ಯ ತಿಳಿಸಿಕೊಟ್ಟಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಸಂಸತ್ತಿನಲ್ಲಿ ಮಸೂದೆ ಮಂಡನೆಗೆ ಯಾಕೆ ಕಾಂಗ್ರೆಸ್ ಅಡ್ಡಿ ಮಾಡುತ್ತಿದೆ. ಇದನ್ನು ಸಿದ್ದರಾಮಯ್ಯ ಅವರಿಗೆ ಕೇಳಲು ಬಯಸುತ್ತೇನೆ. ತಳವಾರ & ಪರಿವಾರ ಸಮುದಾಯಗಳನ್ನು ಎಸ್ಟಿಗೆ ಸೇರಿಸಿದ್ದು ಮೋದಿ ಸರ್ಕಾರ. 10 ಸಾವಿರ ಕುಟುಂಬಕ್ಕೆ ಮೋದಿ ಸರ್ಕಾರ ವಿಮಾ ಸೌಲಭ್ಯ ನೀಡಿದೆ. ಕಾಂಗ್ರೆಸ್’ಗೆ ಕರ್ನಾಟಕ ಎಟಿಎಂ ಎಂದು ಲೇವಡಿ ಮಾಡಿದ್ದಾರೆ ಅಮಿತ್ ಶಾ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಬದಲಾಯಿಸಬೇಕಿದೆ. ಕಾಂಗ್ರೆಸ್ ಸರ್ಕಾರಕ್ಕೂ ಹಾಗೂ ಭ್ರಷ್ಟಾಚಾರಕ್ಕೂ ಅವಿನಾಭಾವ ಸಂಬಂಧವಿದೆ. ಈ ಬಾರಿ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಗೆಲ್ಲುವ ವಿಶ್ವಾಸವಿದೆ. ಜನರು ಸಿದ್ದರಾಮಯ್ಯ ಸರ್ಕಾರದ ಧೋರಣೆಯಿಂದ ಬೇಸತ್ತಿದ್ದಾರೆ. ಜನರು ಸಿದ್ದರಾಮಯ್ಯ ಸರ್ಕಾರವನ್ನು ಬದಲಿಸಲು ನಿರ್ಧರಿಸಿದ್ದಾರೆ ಎಂದಿದ್ದಾರೆ.
-
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.