
ಬೆಂಗಳೂರು (ಜ.27): ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಜೆಡಿಎಸ್’ನಿಂದ ಅಮಾನತುಗೊಂಡ ಶಾಸಕರು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡುವ ಮೂಲಕ ಮತ್ತೊಂದು ಅಚ್ಚರಿಯನ್ನು ಹುಟ್ಟುಹಾಕಿದ್ದಾರೆ.
ಶಾಸಕರಾದ ಚೆಲುವರಾಯಸ್ವಾಮಿ, ಎಚ್. ಸಿ. ಬಾಲಕೃಷ್ಣ, ಜಮೀರ್ ಅಹ್ಮದ್, ಅಖಂಡ ಶ್ರೀನಿವಾಸ್ ಮೂರ್ತಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ್ದಾರೆ.
ಜೆಡಿಎಸ್ ಮರಳಿ ತಮ್ಮನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತದೆ ಎನ್ನುವುದು ಇವರ ಲೆಕ್ಕಾಚಾರವಾಗಿತ್ತು. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರು ಈ ಬಗ್ಗೆ ಯಾವುದೇ ಒಲವು ತೋರದ ಹಿನ್ನೆಲೆಯಲ್ಲಿ ಉಚ್ಛಾಟಿತ ಶಾಸಕರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸೇರುವತ್ತ ಒಲವು ತೋರಿದಂತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.