ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು ಸುವರ್ಣ ನ್ಯೂಸ್ ಕವರ್ ಸ್ಟೋರಿ; ಬಾಂಗ್ಲಾ ವಲಸಿಗರ ತನಿಖೆಗೆ ಗೃಹಸಚಿವರ ಆದೇಶ

By Suvarna Web DeskFirst Published Nov 15, 2017, 10:22 PM IST
Highlights

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಲು ಎಲ್ಲೆಡೆ ಪರಿಶೀಲನೆ ನಡೆಸುವಂತೆ ರಾಜ್ಯದ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದರು.  

ಬೆಂಗಳೂರು (ನ.15): ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಲು ಎಲ್ಲೆಡೆ ಪರಿಶೀಲನೆ ನಡೆಸುವಂತೆ ರಾಜ್ಯದ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದರು.  

ರಾಜ್ಯದಲ್ಲಿನ ಬಾಂಗ್ಲಾ ವಲಸಿಗರ ಕುರಿತಾದ ಸ್ಫೋಟಕ ವರದಿಯನ್ನು ಸುವರ್ಣ ನ್ಯೂಸ್ ಕವರ್​ ಸ್ಟೋರಿ ತಂಡ ಸುದ್ದಿ ಮಾಡಿತ್ತು. ಈ ಕುರಿತು ಗಮನ ಸೆಳೆದ ಬಿಜೆಪಿ ಸುನೀಲ್‌ಕುಮಾರ್‌ರವರ ಪರವಾಗಿ ಪ್ರಶ್ನೋತ್ತರ ಅವಧಿಯಲ್ಲಿ ಜೀವರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರಿಗೆ ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತಿತರ ದಾಖಲಾತಿಗಳನ್ನು ಮಾಡಲು ಅವಕಾಶ ಆಗದಂತೆ ನೋಡಿಕೊಳ್ಳುತ್ತೇವೆ.. ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡುತ್ತೇನೆ ಎಂದರು.

click me!