
ಮಂಡ್ಯ(ಜೂ.22): ಜಿಲ್ಲೆಯ ಪಾಂಡವಪುರ ಪಟ್ಟಣದ tapcms ಗೋದಾಮಿನಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕುತ್ತಿರುವ ಬಗ್ಗೆ ಸುವರ್ಣ ನ್ಯೂಸ್ ಪ್ರಸಾರ ಮಾಡಿದ ವರದಿಗೆ ಕೊನೆಗೂ ತಾಲೂಕು ಆಡಳಿತ ಎಚ್ಚೆತ್ತಿದೆ.
ತಾಲೂಕಿನ ತಹಶೀಲ್ದಾರ್ ಹನುಮಂತರಾಯಪ್ಪ ಸುವರ್ಣ ನ್ಯೂಸ್ ವರದಿ ನೋಡಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕುತ್ತಿದ್ದ ಕುರಿತು ಸಮಗ್ರ ವರದಿ ಕೊಡುವಂತೆ ತಾಲೂಕಿನ ಆಹಾರ ಇಲಾಖೆ ನಿರೀಕ್ಷಕ ಮಂಜುನಾಥ್, ಶಿರಸ್ತೆದಾರ್ ಗಜಾನನ್ ಅವರಿಗೆ ನೋಟೀಸ್ ಜಾರಿ ಮಾಡಿದ್ದಾರೆ. ಅಲ್ಲದೆ ಅಕ್ರಮ ಎಸಗಿರುವ ಸೊಸೈಟಿಗೂ ಕೂಡ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಭ್ರಷ್ಟರನ್ನು ಬಿಡೋ ಇಲ್ಲ. ಕಾನೂನು ಕ್ರಮ ಜರುಗಿಸೋದಾಗಿ ಹೇಳಿದ್ದಾರೆ. ಅಲ್ಲದೆ ಗೋದಾಮಿನಲ್ಲಿರುವ ಅನ್ನಭಾಗ್ಯ ಅಕ್ಕಿಯ ಸ್ಟಾಕ್ ಪರಿಶೀಲನೆ ನಡೆಸುಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕಾಳ ಸಂತೆಯಲ್ಲಿ ಮಾರಾಟವಾಗುತ್ತಿರುವ ಅನ್ನಭಾಗ್ಯ
ಸಿಎಂ ಸಿದ್ದರಾಮಯ್ಯರ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯದ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗ್ತಿದೆ. ಅದು ಕೂಡ ನ್ಯಾಯಬೆಲೆ ಅಂಗಡಿಗೆ ಹೋಗುವ ಉಗ್ರಾಣದ ಗೋದಾಮಿನಲ್ಲೇ ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕುತ್ತಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಬೆಳಕಿಗೆ ಬಂದಿತ್ತು. ಈ ಅವ್ಯವಹಾರ ಬಗ್ಗೆ ಸುವರ್ಣನ್ಯೂಸ್ ವಿಸ್ತೃತವಾಗಿ ವರದಿ ಪ್ರಸಾರ ಮಾಡಿತ್ತು. ಇದು ಸುವರ್ಣನ್ಯೂಸ್ ಬಿಗ್ ಇಂಪ್ಯಾಕ್ಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.