
ಕಲಬುರಗಿ (ನ.30): ಕಲಬುರಗಿಯಲ್ಲಿ ಬಾಲ್ಯವಿವಾಹ ಹೆಚ್ಚುತ್ತಿರುವ ಬಗ್ಗೆ ಸುವರ್ಣನ್ಯೂಸ್ ವರದಿ ಬೆನ್ನಲ್ಲೇ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬಂದಿವೆ.
ಗುಜ್ಜರ್ ಸಮುದಾಯದ ಕರಾಳತೆ ಬಗ್ಗೆ ನಿನ್ನೆಯಷ್ಟೇ ಸುವರ್ಣನ್ಯೂಸ್ FIRನಲ್ಲಿ ವರದಿ ಪ್ರಸಾರ ಮಾಡಿತ್ತು. ನಮ್ಮ ವರದಿ ಬೆನ್ನಲ್ಲೇ, ಕಲಬುರಗಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬಂದಿವೆ.
ಇನ್ನು 35ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಿವಾಹ ನಡೆದಿರುವ ಮಾಹಿತಿಯೂ ತಿಳಿದುಬಂದಿದೆ. ಅಧಿಕಾರಿಗಳು ದಾಳಿ ನಡೆಸಿ ಮುಚ್ಚಳಿಕೆ ಬರೆಸಿಕೊಂಡ ನಂತರವೂ, ಪೋಷಕರು ಗುಪ್ತವಾಗಿ ಮದುವೆ ಮಾಡಿಸಿರುವ ಹಲವಾರು ಪ್ರಕರಣಗಳನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಮುಚ್ಚಳಿಕೆ ಬರೆದುಕೊಟ್ಟ ನಂತರವೂ ಮದುವೆ ಮಾಡಿದ ನೂರಾರು ಪೋಷಕರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು ಪುಟ್ಟ ಮಕ್ಕಳನ್ನು ಬಾಲ ಮಂದಿರಕ್ಕೆ ಕರೆ ತರಲಾಗುತ್ತಿದೆ. ಒಟ್ಟಾರೆ ಸುವರ್ಣನ್ಯೂಸ್ ವರದಿ ಸಂಚಲನ ಸೃಷ್ಟಿಸಿದ್ದು, ವರದಿಗೆ ಪ್ರತಿಫಲ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.