
ನವದೆಹಲಿ (ಮೇ.04): ಕಳೆದ ಬಾರಿ ಸ್ವಚ್ಛತೆಯಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದ್ದ ಮೈಸೂರು 5 ನೇ ಸ್ಥಾನಕ್ಕೆ ಕುಸಿದಿದೆ. ಮಧ್ಯಪ್ರದೇಶದ ಇಂದೋರ್ ಮೊದಲ ಸ್ಥಾನ ಪಡೆದುಕೊಂಡಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ನಡೆಸಿದ ಸ್ಚಚ್ಚ ಸಮೀಕ್ಷೆ 2017 ರ ವರದಿಯನ್ನು ಕೇಂದ್ರ ನಗರಾಭಿವೃದ್ದಿ ಸಚಿವ ವೆಂಕಯ್ಯ ನಾಯ್ಡು ಬಿಡುಗಡೆಗೊಳಿಸಿದರು.
434 ನಗರಗಳನ್ನು ಸಮೀಕ್ಷೆ ನಡೆಸಿದ್ದು ಆ ಪೈಕಿ ಮಧ್ಯಪ್ರದೇಶದ ಇಂದೋರ್ ಅತ್ಯಂತ ಸ್ವಚ್ಚ ನಗರಿ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದೇ ರೀತಿ ಭೂಪಾಲ್ 2 ನೇ ಸ್ಥಾನದಲ್ಲಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ 3 ನೇ ಸ್ಥಾನದಲ್ಲಿದೆ. ಗುಜರಾತ್ ನ ಸೂರತ್ 4 ನೇ ಸ್ಥಾನದಲ್ಲಿದೆ. ಕಳೆದ ವರ್ಷ ಅಗ್ರ ಸ್ಥಾನದಲ್ಲಿದ್ದ ಮೈಸೂರು ಈ ಬಾರಿ 5 ನೇ ಸ್ಥಾನಕ್ಕೆ ಕುಸಿದಿದೆ. ಉತ್ತರ ಪ್ರದೇಶದ ಗೋಂಡಾ ಅತ್ಯಂತ ಕೊಳಕು ಎನ್ನುವ ಕುಖ್ಯಾತಿಗೆ ಪಾತ್ರವಾಗಿದೆ.
434 ನಗರಗಳಲ್ಲಿ ಸಮಿಕ್ಷೆ ನಡೆಸಲಾಗಿದೆ. 18 ಲಕ್ಷಕ್ಕೂ ಹೆಚ್ಚು ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಪ್ರಧಾನಿಯವರ ಮಹತ್ವಾಕಾಂಕ್ಷೆ ಯೋಜನೆ ಸ್ವಚ್ಚ ಭಾರತ್ ಗೆ ಜನರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಮೀಕ್ಷೆಯ ಫಲಿತಾಂಶ ಪ್ರೋತ್ಸಾಹದಾಯಕವಾಗಿದೆ. ಸ್ವಚ್ಚ ಭಾರತವು ಪರಿಣಾಮಕಾರಿಯಾಗಿ ಜಾರಿಯಾಗಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.