
ದಾವಣಗೆರೆ(ಜ.1): ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದ ಸಿದ್ದಲಿಂಗೇಶ್ವರ ಸ್ವಾಮೀಜಿ ಅಲ್ಲಿಯ ಕೆಲಸಗಾರನ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿಹರದ ಹೊರವಲಯದಲ್ಲಿರುವ ಪಂಚಮಸಾಲಿ ಪೀಠದಲ್ಲಿ ಬೀಡುಬಿಟ್ಟಿರುವ ಸ್ವಾಮೀಜಿ ಇಲ್ಲಿನ ಬೆಳವಣಿಗೆಗಳನ್ನು ಚಾಚು ತಪ್ಪದೇ ಪಂಚಮಸಾಲಿ ಟ್ರಸ್ಟ್ ಗೆ ತಿಳಿಸುತ್ತಾನೆ ಎಂಬ ಕಾರಣಕ್ಕೆ ಸ್ವಾಮೀಜಿ ಹಲ್ಲೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ಸ್ವಾಮೀಜಿ ಹಾಗೂ ಪಂಚಮಸಾಲಿ ಟ್ರಸ್ಟ್ ನಡುವೆ ಬಹಿರಂಗ ಸಮರವೇ ನಡೆಯುತ್ತಿದ್ದು ಸ್ವಾಮೀಜಿಯನ್ನು ಪೀಠದಿಂದ ಉಚ್ಛಾಟಿಸಲಾಗಿದೆ.ಆದರೆ ತಮ್ಮ ಉಚ್ಛಾಟನೆ ಕ್ರಮವನ್ನು ಹಲ್ಲಗಳೆದಿರುವ ಸಿದ್ದಲಿಂಗೇಶ್ವರ ಸ್ವಾಮೀಜಿ ಪಂಚಮಸಾಲಿ ಪೀಠದ ಕೊಠಡಿಯೊಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.
ಪೀಠದ ಆವರಣದಲ್ಲಿ ಟ್ರಸ್ಟ್ ವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು ಹತ್ತಾರು ಕೆಲಸಗಾರರು ಅಲ್ಲಿದ್ದಾರೆ.ಆದರೆ ಸ್ವಾಮೀಜಿ ಚಲನವಲನಗಳ ಬಗ್ಗೆ ಟ್ರಸ್ಟ್'ಗೆ ಮಲ್ಲೇಶ್ ಎಂಬುವನು ಮಾಹಿತಿ ನೀಡುತ್ತಿದ್ದಾನೆ ಎಂದು ತಿಳಿದು ಮಠದ ಆವರಣದಲ್ಲಿ ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ನಂತರ ಕೆಳಗೆ ಬೀಳಿಸಿ ಕಾಲಿನಿಂದ ತುಳಿದಿದ್ದಾರೆಂದು ಮಲ್ಲೇಶ್ ಆರೋಪಿಸಿದ್ದಾರೆ.ಈ ಬಗ್ಗೆ ಮಲ್ಲೇಶ್ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.